ಹಿಜಾಬ್ ವಿವಾದ: ಉಡುಪಿ ಜಿಲ್ಲೆಯಾದ್ಯಂತ ಭದ್ರತೆ
ಉಡುಪಿ : ಹಿಜಾಬ್ ಸಂಬಂಧ ಹೈಕೋರ್ಟ್ ತೀರ್ಪಿನ ಹಿನ್ನೆಲೆ ಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಜಿಲ್ಲಾಧಿಕಾರಿ ಆದೇಶದಂತೆ ಜಿಲ್ಲೆಯಾದ್ಯಂತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಎಂಜಿಎಂ ಕಾಲೇಜು ಹಾಗೂ ಕುಂದಾಪುರದ ವಿವಿಧ ಕಾಲೇಜುಗಳಿಗೆ ಸೇರಿದಂತೆ ಎಲ್ಲ ಕಾಲೇಜು ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಪ್ರಮುಖ ಧಾರ್ಮಿಕ ಕೇಂದ್ರಗಳಿಗೂ ಪೊಲೀಸ್ ಭದ್ರತೆ ನೀಡಲಾಗಿತ್ತು. ನಗರದ ಜಾಮೀಯ ಮಸೀದಿಯ ಆವರಣ ದಲ್ಲಿ ಕೆಎಸ್‌ಆರ್‌ಪಿ ತುಕಡಿ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸ ಲಾಗಿತ್ತು. ಉಡುಪಿ ನಗರದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಟಿ.ಸಿದ್ಧಲಿಂಗಪ್ಪ ಹಾಗೂ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಭದ್ರತೆ ಉಸ್ತುವಾರಿ ವಹಿಸಿಕೊಂಡರು.
Next Story