Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.16ರಂದು 12-14 ವರ್ಷದ ಮಕ್ಕಳಿಗೆ...

ಮಾ.16ರಂದು 12-14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಗೆ ಚಾಲನೆ

ಉಡುಪಿ ಜಿಲ್ಲೆಯಲ್ಲಿ 37,468 ಮಕ್ಕಳಿಗೆ ಲಸಿಕೆಯ ಗುರಿ

ವಾರ್ತಾಭಾರತಿವಾರ್ತಾಭಾರತಿ15 March 2022 9:16 PM IST
share
ಮಾ.16ರಂದು  12-14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಗೆ ಚಾಲನೆ

ಉಡುಪಿ : ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 12ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಬುಧವಾರ ಮಾ.16ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗುವುದು.

ಜಿಲ್ಲೆಯಲ್ಲಿ ಮಾರ್ಚ್ 16ರಿಂದ 12ರಿಂದ 14 ವರ್ಷದವರೆಗಿನ ಒಟ್ಟು 37,468 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತ್ತಿದ್ದು, ಪ್ರಾರಂಭಿಕವಾಗಿ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಲಸಿಕಾ ಶಿಬಿರಕ್ಕೆ ಚಾಲನೆ ನೀಡಲಾ ಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

2008, 2009 ಮತ್ತು 2010ರ ಮಾರ್ಚ್ 15ರ ಒಳಗೆ ಜನಿಸಿದ ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದು, ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ ೧೨ವರ್ಷದಿಂದ ೧೪ ವರ್ಷದವರೆಗಿನ ಮಕ್ಕಳಿಗೆ ಅವರು ವಾಸಿಸುವ ಸ್ಥಳದ ಹತ್ತಿರದ ಲಸಿಕಾ ಶಿಬಿರದಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.

ಮಕ್ಕಳು ಲಸಿಕೆ ಪಡೆಯಲು ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಅಗತ್ಯವಿದ್ದು, ಪೋಷಕರು ಮಕ್ಕಳ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಮತ್ತು ಪೋಷಕರ ಮೊಬೈಲ್ ಸಂಖ್ಯೆ ನೀಡಿ, ಮಕ್ಕಳು ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು ಎಂದರು.

ಫಲಾನುಭವಿ ಮಕ್ಕಳು ಸ್ವಂತ ಮೊಬೈಲ್ ಸಂಖ್ಯೆ ಬಳಸಿ ಅಥವಾ ಕೋವಿನ್ ಪೋರ್ಟಲ್‌ನಲ್ಲಿ ಈಗಾಗಲೇ ಇರುವ ಪೋಷಕರ ಅಕೌಂಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಒಂದು ವೇಳೆ ಲಭ್ಯವಿಲ್ಲದಿದ್ದರೆ ಶಾಲೆಯ ಮುಖ್ಯೋಪಾಧ್ಯಾಯರ ಅಥವಾ ಶಿಕ್ಷಕರ ಮೊಬೈಲ್ ಸಂಖ್ಯೆ ಮೂಲಕ ಲಸಿಕಾ ಶಿಬಿರದಲ್ಲಿಯೂ ನೋಂದಣಿ ಮಾಡಿಕೊಳ್ಳಬಹುದು. ಲಸಿಕಾ ಶಿಬಿರದ ದಿನಾಂಕದಂದು ಪೋಷಕರು ಲಸಿಕಾ ಶಿಬಿರ ನಡೆಯುವ ಶಿಕ್ಷಣ ಸಂಸ್ಥೆಗಳಲ್ಲಿ ಉಪಸ್ಥಿತರಿದ್ದು, ಲಸಿಕಾ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದವರು ಮನವಿ ಮಾಡಿದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಲ್ಲಿ ಪ್ರಥಮ ಡೋಸ್ ಶೇ.100ರಷ್ಟು ಸಾಧನೆಯಾಗಿದ್ದು, ದ್ವಿತೀಯ ಡೋಸ್‌ನಲ್ಲಿ ಶೇ.93.50ರಷ್ಟು ಸಾಧನೆಯಾಗಿದೆ.  15 ವರ್ಷ ಮೇಲ್ಪಟ್ಟವರನ್ನು ಪರಿಗಣಿಸಿದಾಗ ಪ್ರಥಮ ಡೋಸ್ ಶೇ.99.92 ಮತ್ತು ದ್ವಿತೀಯ ಡೋಸ್ ಶೇ.92..87 ಸಾಧನೆ ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X