ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಶಂಕರನಾರಾಯಣ : ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾ.14ರಂದು ಸಂಜೆ ಸಿದ್ದಾಪುರ ಗ್ರಾಮದ ಹೆನ್ನಾಬೈಲು ಸಮೀಪದ ಚೀನಾಬೇರು ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಬೈಕ್ ಸವಾರ ತನ್ವೀರ್ ಕೆ.ಎ.(27) ಎಂದು ಗುರುತಿಸಲಾಗಿದೆ. ಹೊಸಂಗಡಿ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಬಸ್, ಸಿದ್ದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡ ತನ್ವೀರ್, ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story