ಮೈಸೂರು; ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ಮನೆ ಮೇಲೆ ಎಸಿಬಿ ದಾಳಿ

ಮೈಸೂರು: ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದಾರೆ ಎಂಬ ಮಾಹಿತಿ ಆಧರಿಸಿ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಾದ್ಯಂತ ಏಕಕಾಲದಲ್ಲಿ ಹಲವು ಕಡೆಗಳಲ್ಲಿ ಈ ದಾಳಿ ನಡೆಸಲಾಗಿದ್ದು, ಅದರಂತೆ ವಿಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Next Story





