ಉಡುಪಿ: ಮಾ.29ಕ್ಕೆ ಮಿನಿ ಉದ್ಯೋಗ ಮೇಳ
ಉಡುಪಿ : ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ ಮಣಿಪಾಲ, ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇವರ ಸಂಯುಕ್ತ ಆಶ್ರಯದಲ್ಲಿ ಮಿನಿ ಉದ್ಯೋಗ ಮೇಳವೊಂದು ಮಾರ್ಚ್ ೨೯ರಂದು ಬೆಳಗ್ಗೆ ೯:೩೦ರಿಂದ ಅಜ್ಜರಕಾಡಿನಲ್ಲಿರುವ ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಆಸಕ್ತರಿರುವ ಎಸ್ಸೆಸೆಲ್ಸಿ, ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ಕನಿಷ್ಠ ಮೂರು ರೆಸ್ಯೂಮ್ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಹಾಗೂ ನೋಂದಣಿಗಾಗಿ ಆನ್ಲೈನ್ - https://udupi.nic.in -ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.