Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲಸಿಕೆಯಿಂದ ಮಕ್ಕಳಿಗೆ ಕೋವಿಡ್‌ನಿಂದ...

ಲಸಿಕೆಯಿಂದ ಮಕ್ಕಳಿಗೆ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ : ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ16 March 2022 8:10 PM IST
share
ಲಸಿಕೆಯಿಂದ ಮಕ್ಕಳಿಗೆ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ : ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಇಂದಿನಿಂದ 12ರಿಂದ 14 ವರ್ಷದವರೆಗಿನ ಮಕ್ಕಳಿಗೆ ಉಚಿತವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತಿದೆ. ಈ ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು, ಇದನ್ನು ಮುಂಜಾಗ್ರತೆಯಾಗಿ ಎಲ್ಲಾ ರೀತಿಯಲ್ಲಿ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಖಾತ್ರಿಯಾಗಿರುವುದರಿಂದ, ಜಿಲ್ಲೆಯ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆ ಕೊಡಿಸುವ ಮೂಲಕ ಮಕ್ಕಳಿಗೆ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ ಒದಗಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಬುಧವಾರ ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ೧೨ ರಿಂದ ೧೪ ವರ್ಷದವರೆಗಿನ ಮಕ್ಕಳಿಗೆ ಕೋವಿಡ್-೧೯ ಲಸಿಕೆ ನೀಡುವ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

೧೨ರಿಂದ ೧೪ ವರ್ಷದವರೆಗಿನ ಮಕ್ಕಳಿಗೆ ಲಸಿಕೆ ಕೊಡಿಸಲು ಎಲ್ಲಾ ಪೋಷಕರು ಹಾಗೂ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಮಕ್ಕಳ ಪೋಷಕರ ಸಭೆಗಳನ್ನು ನಡೆಸಿ, ಅಗತ್ಯ ಮಾಹಿತಿ ನೀಡುವಂತೆ ಎಲ್ಲಾ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ೨೦೦೮ರಿಂದ ೨೦೧೦ರ ಮಾರ್ಚ್ ೧೫ ರೊಳಗೆ  ಜನಿಸಿದ ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದು, ಮೊದಲ ಡೋಸ್ ಪಡೆದ ೨೮ ದಿನಗಳ ನಂತರ ೨ನೇ ಡೋಸ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಶೇ.೧೦೦ರಷ್ಟು ಸಾಧನೆ ಆಗಿದ್ದು, ೧೨ರಿಂದ ೧೪ ವರ್ಷದವರೆಗಿನ ಮಕ್ಕಳ ಲಸಿಕೆ ನೀಡುವಲ್ಲಿ ಸಹ ಶೇ.೧೦೦ ಸಾಧನೆ ಮಾಡಲು ಹಾಗೂ ಉಡುಪಿ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯಾಗಿಸಲು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭೆ ಸದಸ್ಯ ಬಾಲಕೃಷ್ಣ ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಆಯುಷ್ ಆಸ್ಪತ್ರೆಯ ವೈದ್ಯ ಡಾ.ದಿನಕರ ಡೋಂಗ್ರೆ, ಜಿಲ್ಲಾಸ್ಪತ್ರೆಯ ವೈದ್ಯ ಡಾ. ಚಂದ್ರಶೇಖರ ಅಡಿಗ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ಯಾಕೂಬ್ ಖಾದರ್ ಗುಲ್ವಾಡಿ ಅವರ ನಿರ್ದೇಶನದ ‘ಗೋ ಕೊರೋನಾ’ ವೀಡಿಯೋ ಗೀತೆಯನ್ನು ಬಿಡುಗಡೆಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X