ಮಾ.17ರಂದು ಸ್ವಯಂ ಪ್ರೇರಿತ ಬಂದ್ ಆಚರಿಸುಲು ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಮನವಿ
ಕೃಷ್ಣಾಪುರ: ಹಿಜಾಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಮಾರ್ಚ್17ರಂದು ಸ್ವಯಂ ಪ್ರೇರಿತ ಬಂದ್ ಆಚರಿಸುಲು ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಕೃಷ್ಣಾಪುರ ಮನವಿ ಮಾಡಿದೆ.
ಮಾರ್ಚ್17ರಂದು ಕರ್ನಾಟಕದಾದ್ಯಂತ ಸ್ವಯಂ ಪ್ರೇರಿತ ವ್ಯವಹಾರ ಸ್ಥಗಿತಕ್ಕೆ ಕರೆ ನೀಡಲಾಗಿದ್ದು, ಪರಿಸರದ ಎಲ್ಲಾ ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು ಮತ್ತು ಇತರರು ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲು ಮನವಿ ಮಾಡುತ್ತಿದ್ದೇವೆ ಎಂದು ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾತ್ ಕೃಷ್ಣಾಪುರ ಆಡಳಿತ ಸಮಿತಿಯ ಅಲ್ ಹಾಜಿ ಬಿ.ಯಂ. ಮಾಮ್ತಝ್ ಆಲಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





