Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದವಿ, ನಸಿರ್ಂಗ್,...

ಪದವಿ, ನಸಿರ್ಂಗ್, ಪಿ.ಜಿ.ವಿದ್ಯಾರ್ಥಿಗಳಿಗೂ ಟ್ವಿನ್ನಿಂಗ್ ಯೋಜನೆ ವಿಸ್ತರಣೆ: ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ16 March 2022 11:59 PM IST
share
ಪದವಿ, ನಸಿರ್ಂಗ್, ಪಿ.ಜಿ.ವಿದ್ಯಾರ್ಥಿಗಳಿಗೂ ಟ್ವಿನ್ನಿಂಗ್ ಯೋಜನೆ ವಿಸ್ತರಣೆ: ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವ

ಬೆಂಗಳೂರು, ಮಾ.16: ಸದ್ಯಕ್ಕೆ ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇರುವ ಟ್ವಿನ್ನಿಂಗ್ ಡಿಗ್ರಿ ಯೋಜನೆಯನ್ನು ಪದವಿ, ಸ್ನಾತಕೋತ್ತರ ಪದವಿ ಮತ್ತು ನಸಿರ್ಂಗ್ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಅಮೆರಿಕದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಪ್ರಾಥಮಿಕ ಸುತ್ತಿನ ಚರ್ಚೆ ನಡೆಸಿದರು.

ವಿಕಾಸಸೌಧದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಅಮೆರಿಕದ ಪೆನ್ಸಿಲ್ವೇನಿಯಾದ ರಾಯಭಾರಿ ಕನ್ನಿಕಾ ಚೌಧರಿ ಮತ್ತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

'ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳು ಅಮೆರಿಕದ ಮಾಂಟ್ಗೊಮೆರಿ ಕೌಂಟಿ ಕಮ್ಯುನಿಟಿ ಕಾಲೇಜಿನಲ್ಲಿ ಓದುವ ಸಂಬಂಧ ಮಾಡಿಕೊಂಡಿದ್ದ ಒಪ್ಪಂದ ಈಗಾಗಲೇ ಅನುಷ್ಠಾನಕ್ಕೆ ಬಂದಿದೆ. ಇದನ್ನು ವಿಸ್ತರಿಸಬೇಕಾದ ಅಗತ್ಯವಿದ್ದು, ಇದು ಶಿಕ್ಷಣದ ಅಂತರ್‍ರಾಷ್ಟ್ರೀಕರಣಕ್ಕೆ ಪೂರಕವಾಗಿರಲಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ಉದ್ದೇಶಿತ ಗುರಿಯನ್ನು ಸಾಧಿಸಬೇಕೆಂದರೆ ಅಮೆರಿಕದ ಅಥೆನ್ಸ್ ವಿಶ್ವವಿದ್ಯಾಲಯ, ಪೆನ್ಸಿಲ್ವೇನಿಯಾದ ಯಾರ್ಕ್ ಕಾಲೇಜ್, ಹ್ಯಾರಿಸ್ ಬರ್ಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಇಂಡಿಯಾನಾ ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ, ಹ್ಯೂಸನ್ ಯೂನಿವರ್ಸಿಟಿ, ಥಿಯಲ್ ಕಾಲೇಜು ಮತ್ತು ಅಲ್ವರ್ನಿಯಾ ಹಾಗೂ ಮಿಸರಿಕಾರ್ಡಿಯಾ ವಿ.ವಿ.ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು ಸೂಕ್ತ ಎಂದು ಕನ್ನಿಕಾ ಅವರು ಸಭೆಗೆ ತಿಳಿಸಿದರು.

ಟ್ವಿನ್ನಿಂಗ್ ಕಾರ್ಯಕ್ರಮದಡಿ ನಮ್ಮ ವಿದ್ಯಾರ್ಥಿಗಳನ್ನು ಪದವಿ/ಸ್ನಾತಕೋತ್ತರ ಪದವಿಯ ನಿರ್ದಿಷ್ಟ ವರ್ಷಗಳಲ್ಲಿ ಅಮೆರಿಕದ ವಿ.ವಿ.ಗಳಿಗೇ ನೇರವಾಗಿ ಕಳುಹಿಸಿ ಕೊಡಲಾಗುವುದು. ವೇತನಸಹಿತ ಇಂಟರ್ನ್-ಶಿಪ್ ವ್ಯವಸ್ಥೆ ಇದರ ಭಾಗವಾಗಿರಲಿದೆ. ಅಲ್ಲದೆ, ಇಷ್ಟವಿರುವವರು ಅಮೆರಿಕದಲ್ಲೇ ಉದ್ಯೋಗಿಗಳಾಗಿ ನೆಲೆಯೂರಲು ಅವಕಾಶವಿರಲಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.

ಒಡಂಬಡಿಕೆಗಳು ಜಾರಿಗೆ ಬಂದರೆ 6 ವರ್ಷಗಳ ಟ್ವಿನ್ನಿಂಗ್ ಡಿಗ್ರಿ, 5 ವರ್ಷಗಳ ಇಂಟಿಗ್ರೇಟೆಡ್ ಸ್ನಾತಕೋತ್ತರ ಪದವಿ, 4 ವರ್ಷಗಳ ಟ್ವಿನ್ನಿಂಗ್ ಸ್ನಾತಕೋತ್ತರ ಪದವಿ, ಎಂ.ಎಸ್. ನಸಿರ್ಂಗ್ (ಇಂಟಿಗ್ರೇಟೆಡ್) ಮತ್ತು ಎಂ.ಎಸ್.ಬಯೋಕೆಮಿಸ್ಟ್ರಿ (ಇಂಟಿಗ್ರೇಟೆಡ್) ಪದವಿ ಹೊಂದಲು ಅವಕಾಶ ಸಿಗಲಿವೆ ಎಂದು ಅವರು ಮಾಹಿತಿ ನೀಡಿದರು.

ಅಲ್ಲದೆ, `ಆರೋಗ್ಯ ಕ್ಷೇತ್ರದಲ್ಲಿ ನಸಿರ್ಂಗ್ ಮತ್ತು ಆರೋಗ್ಯ ವ್ಯವಸ್ಥಾಪನಾ ಪದವಿಗಳಿಗೆ ತುಂಬಾ ಬೇಡಿಕೆ ಇದೆ. ಇದನ್ನು ಗುಣಮಟ್ಟದೊಂದಿಗೆ ಕಲಿಸಬೇಕಾದ್ದು ಅಗತ್ಯವಿದೆ. ಇಂತಹ ಕೋರ್ಸುಗಳಿಗೆ ಆಗುವ ವೆಚ್ಚ ಮತ್ತು ಅದರ ಸ್ವರೂಪ ಹೇಗಿರಬೇಕು, ಇದನ್ನು ಹೇಗೆ ಜಾರಿಗೊಳಿಸಬೇಕು ಎನ್ನುವುದನ್ನು ಅಧಿಕಾರಿಗಳು ಕೆಲವೇ ದಿನಗಳಲ್ಲಿ ಆಖೈರುಗೊಳಿಸಬೇಕು ಎಂದು ಅವರು ಹೇಳಿದರು.

ಇಂತಹ ಒಡಂಬಡಿಕೆಗಳಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉನ್ನತ ಅಧ್ಯಯನಕ್ಕೆ ಅವಕಾಶ ಸಿಗಲಿದೆ. ಆಯ್ಕೆಯಾಗುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ತಗುಲುವ ವೆಚ್ಚವನ್ನು ಸರಕಾರವೇ ಸಂಪೂರ್ಣವಾಗಿ ಭರಿಸಲು ಅವಕಾಶ ಇದೆ. ಅಗತ್ಯ ಬಿದ್ದರೆ ಬ್ಯಾಂಕ್ ಸಾಲಕ್ಕೆ ಕೂಡ ವ್ಯವಸ್ಥೆ ಮಾಡಲಾಗುವುದು ಎಂದು ಅವರು ನುಡಿದರು.

ಹ್ಯಾರಿಸ್ಬರ್ಗ್ ವಿವಿ ಜತೆ ಒಡಂಬಡಿಕೆಗೆ ಬೆಂಗಳೂರು ನಗರ ವಿವಿ ಆಸಕ್ತಿ: ಇಂಗ್ಲಿಷ್ ಕಲಿಕೆ ಮತ್ತು ಕಂಪ್ಯೂಟರ್ ವಿಜ್ಞಾನದಲ್ಲಿ ಇಂಟಿಗ್ರೇಟೆಡ್ ಪದವಿಗೆ ಅವಕಾಶ ಕಲ್ಪಿಸುವ ಮಹತ್ವಾಕಾಂಕ್ಷೆಯುಳ್ಳ ಒಡಂಬಡಿಕೆ ಮಾಡಿಕೊಳ್ಳುವ ಸಂಬಂಧ ಬೆಂಗಳೂರು ನಗರ ವಿಶ್ವವಿದ್ಯಾಲಯ ಮತ್ತು ಅಮೆರಿಕದ ಹ್ಯಾರಿಸ್ ಬರ್ಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಪರಸ್ಪರ ಪತ್ರ ಮತ್ತು ದಾಖಲಾತಿಗಳನ್ನು ಬುಧವಾರ ವಿನಿಮಯ ಮಾಡಿಕೊಂಡಿವೆ.

ಬೆಂಗಳೂರು ನಗರ ವಿವಿ ಪರವಾಗಿ ಕುಲಪತಿ ಡಾ.ಲಿಂಗರಾಜ ಗಾಂಧಿ ಮತ್ತು ಹ್ಯಾರಿಸ್ಬರ್ಗ್ ವಿ.ವಿ ಪರವಾಗಿ ಕನ್ನಿಕಾ ಚೌಧರಿ ಈ ದಾಖಲಾತಿಗಳನ್ನು ಪರಸ್ಪರ ಹಸ್ತಾಂತರಿಸಿಕೊಂಡರು. ಈ ಒಪ್ಪಂದ ಅಂತಿಮರೂಪ ಪಡೆದುಕೊಂಡ ನಂತರ ಬೆಂಗಳೂರು ನಗರ ವಿ.ವಿ. ವಿದ್ಯಾರ್ಥಿಗಳು ಹ್ಯಾರಿಸ್ಬರ್ಗ್ ವಿ.ವಿ.ಯಲ್ಲಿ ನಡೆಯುವ ಇಂಗ್ಲಿಷ್ ಕಲಿಕಾ ಕಾರ್ಯಕ್ರಮಗಳ ಲಾಭವನ್ನು ಪಡೆಯಬಹುದು. ಜತೆಗೆ, ಅಮೆರಿಕದ ಶೈಕ್ಷಣಿಕ ಕಾರ್ಯಕ್ರಮಗಳ ಭಾಗವಾಗಬಹುದು ಅಥವಾ ಅವುಗಳಿಗೆ ಹಾಜರಾಗಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ. 

ಅಲ್ಲದೆ, ವಿದ್ಯಾರ್ಥಿ ವಿನಿಮಯ ಉಪಕ್ರಮದಡಿ ಇಲ್ಲಿನ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳಿ ಕಂಪ್ಯೂಟರ್ ವಿಜ್ಞಾನ ವಿಷಯದಲ್ಲಿ ಇಂಟಿಗ್ರೇಟೆಡ್ ಡಿಗ್ರಿ ಅಧ್ಯಯನ ಮಾಡಬಹುದು ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X