ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಸನ್ಮಾನ

ಉಡುಪಿ : ಕರ್ನಾಟಕ ಪುಸ್ತಕ ಪ್ರಾಧಿಕಾರವು ಮೈಸೂರಿನಲ್ಲಿ ಆಯೋಜಿಸಿದ ಪ್ರಕಾಶಕರ ದ್ವಿತೀಯ ಸಮ್ಮೇಳನದಲ್ಲಿ ಪ್ರಕಾಶನ ಕ್ಷೇತ್ರದಲ್ಲಿ ೫೭ ವರ್ಷಗಳಿಂದ ತೊಡಗಿಸಿಕೊಂಡಿರುವ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವನ್ನು ಗೌರವಿಸಿತು.
ಕೇಂದ್ರದ ಪರವಾಗಿ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಅವರು ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಜಿ, ಸದಸ್ಯ ಪ್ರೊ.ಎ.ವಿ.ನಾವಡ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ, ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಹೊಸಮನಿ ಹಾಗೂ ಇತರರು ಉಪಸ್ಥಿತರಿದ್ದರು.
Next Story