ಬಂದ್ ನಡೆಸಿರುವುದು ಹಿಜಾಬ್ ವಿವಾದ ಜೀವಂತವಿರಿಸುವ ಹುನ್ನಾರ: ಬಿಜೆಪಿ
ಉಡುಪಿ : ಸಂವಿಧಾನ ಮತ್ತು ಈ ನೆಲದ ಕಾನೂನಿಗೆ ಗೌರವ ನೀಡದೆ ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಆಚರಿಸು ವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಾಗಿರಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ.
ನ್ಯಾಯಕ್ಕಾಗಿ ಹೈಕೋರ್ಟಿಗೆ ಮೊರೆ ಹೋದವರೇ ಇದೀಗ ಉಚ್ಛ ನ್ಯಾಯಾ ಲಯದ ತೀರ್ಪನ್ನು ಪಾಲನೆ ಮಾಡದೇ ಇರುವುದಾದರೆ ನ್ಯಾಯಾಲಯಕ್ಕೆ ಹೋಗುವ ಔಚಿತ್ಯವಾದರೂ ಏನಿತ್ತು? ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.
Next Story