ಶಿಶುಪಾಲನಾ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಆಸಕ್ತ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಮಕ್ಕಳ ಮಾನಸಿಕ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಅಗತ್ಯಗಳಿಗೆ ಅನುಗುಣವಾಗಿ ಪರಿಹಾರ ಕೈಗೊಳ್ಳಲು ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿರುವಂತಹ ಅನುಭವವುಳ್ಳ ಹಾಗೂ ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಶ್ರಮಿಸಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಜಿಲ್ಲೆಯಲ್ಲಿ ಶಿಶುಪಾಲನಾ ಕೇಂದ್ರವನ್ನು ನಡೆಸಲು ಅವಕಾಶವಿದೆ.
ಆಸಕ್ತರು ಎಪ್ರಿಲ್ ೪ರೊಳಗೆ ಉರ್ವಸ್ಟೋರ್‌ನಲ್ಲಿರುವ ದ.ಕ.ಜಿಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story