Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಎಡಿಸಿ ಸದಾಶಿವ ಪ್ರಭುಗೆ...

ಉಡುಪಿ: ಎಡಿಸಿ ಸದಾಶಿವ ಪ್ರಭುಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ17 March 2022 8:50 PM IST
share
ಉಡುಪಿ: ಎಡಿಸಿ ಸದಾಶಿವ ಪ್ರಭುಗೆ ಬೀಳ್ಕೊಡುಗೆ

ಉಡುಪಿ : ಸುಮಾರು ಮೂರು ವರ್ಷಗಳ ಕಾಲ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡಿರುವ ಬಿ.ಸದಾಶಿವ ಪ್ರಭು ಅವರನ್ನು ಹಾರ್ದಿಕವಾಗಿ ಬೀಳ್ಕೊಡುಗೆ ಸಮಾರಂಭ ಇಂದು ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸನ್ಮಾನಕ್ಕೆ ಉತ್ತರಿಸಿದ ಸದಾಶಿವ ಪ್ರಭು, ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ ಎರಡೂವರೆ ವರ್ಷಗಳ ಅವಧಿಯಲ್ಲಿ ಕಂದಾಯ, ಜಿಲ್ಲಾ ಪಂಚಾಯತ್, ಪೌರಾಡಳಿತ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉತ್ತಮವಾದ ಸಹಕಾರವನ್ನು ನೀಡಿದ್ದು, ಇದರಿಂದಾಗಿಯೇ ಜಿಲ್ಲೆಯಲ್ಲಿ ಹಲವು ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು ಎಂದರು.

ಕೋವಿಡ್-೧೯ ಅವಧಿಯಲ್ಲಿ, ಕ್ವಾರಂಟೈನ್ ಕೇಂದ್ರಗಳು ಮತ್ತು ಕೋವಿಡ್ ಕೇರ್‌ಸೆಂಟರ್‌ಗಳ ನಿರ್ವಹಣೆಯು ಸವಾಲಿನ ಕೆಲಸವಾಗಿತ್ತು. ಎಲ್ಲಾ ಇಲಾಖೆ ಗಳ ಸಹಕಾರದಿಂದ ಅದನ್ನು ಯಶಸ್ವಿಯಾಗಿ ನಿಭಾಯಿಸಲಾಯಿತು. ಸಾರ್ವಜನಿಕರಿಗೆ ಕಂದಾಯ ಸೇವೆಗಳನ್ನು ನೀಡುವಲ್ಲಿ, ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯುವಲ್ಲಿ ಸಿಬ್ಬಂದಿಗಳು ನೀಡಿರುವ ಸಹಕಾರ ಸಹ ಮರೆಯಲಾಗದು ಎಂದ ಸದಾಶಿವ ಪ್ರಭು, ತಮ್ಮ ಸೇವಾವಧಿಯಲ್ಲಿ ಸೂಕ್ತ ಮಾರ್ಗದರ್ಶನ ನೀಡಿ, ಸಹಕರಿಸಿದ ಪ್ರತಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಸದಾ ಹಸನ್ಮುಖಿಯಾಗಿದ್ದ ಸದಾಶಿವ ಪ್ರಭು, ಜಿಲ್ಲೆ ಹಲವು ಸಾಧನೆಗಳನ್ನು ಮಾಡುವಲ್ಲಿ ಶ್ರಮ ವಹಿಸಿದ್ದು, ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಉತ್ತಮ ಸಮನ್ವಯತೆ ಹೊಂದಿದ್ದರು. ಜಿಲ್ಲೆಯ ಆಡಳಿತ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು ಎಂದರು.

ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ.  ಮಾತನಾಡಿ,  ಯಾವುದೇ ಕಾರ್ಯಕ್ಕೂ ತಕ್ಷಣ ಪ್ರತಿಕ್ರಿಯೆ ನೀಡಿ ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸದಾಶಿವ ಪ್ರಭು ಸಫಲರಾಗಿದ್ದರು. ತಮಗೆ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸಿದ್ದು, ಎಲ್ಲರೊಂ ದಿಗೂ ಬೆರೆತು, ಕಾರ್ಯ ನಿರ್ವಹಿಸು ವುದು ಇವರ ಉತ್ತಮ ಗುಣ ಎಂದರು.

ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ನೂತನ ಅಪರ ಜಿಲ್ಲಾಧಿಕಾರಿ ವೀಣಾ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗೀತಾ ಎಸ್ ಪ್ರಭು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ ಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಸ್ವಾಗತಿಸಿದರು. ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲೆಪ್ರಡ್ ಡಿಸೋಜಾ ವಂದಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X