Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು...

ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ17 March 2022 11:38 PM IST
share
ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಮಾ.17: ಬೆಂಗಳೂರು ನಗರ ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ನಗರದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಇದರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ 180ಕ್ಕೂ ಹೆಚ್ಚು ಅಂತರ್‍ರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ರಕ್ಷಣಾ ವಲಯ ಹಾಗೂ ಖಾಸಗಿ ವಲಯದ ಸಂಶೋಧನಾ ಕೇಂದ್ರಗಳಿವೆ. ಕೌಶಲ್ಯಭರಿತ ಮಾನವ ಸಂಪನ್ಮೂಲ ಈ ಕ್ಷೇತ್ರದಲ್ಲಿದೆ. ರಕ್ಷಣಾ ಉತ್ಪಾದನೆ, ಸೆಮಿ ಕಂಡಕ್ಟರ್ ಕೈಗಾರಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ನೆರವು ಒದಗಿಸುವಂತೆ ಕೇಂದ್ರ ರಕ್ಷಣಾ ಸಚಿವರಲ್ಲಿ ಅವರು ಮನವಿ ಮಾಡಿದರು.

ಡಿಆರ್‍ಡಿಓ ಸಂಶೋಧನೆಗಳ ಮುಂಚೂಣಿ ಸಂಸ್ಥೆ: ರಕ್ಷಣಾ ವಲಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಮಂತ್ರಿಯವರ ನಾಯಕತ್ವದಲ್ಲಿ ಮುಂಚೂಣಿಯಲ್ಲಿದ್ದು, ದೇಶ ಸುರಕ್ಷಿತವಾಗಿದೆ. ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದ್ದು, ವಿಶ್ವ ಭಾರತದ ಮಾರ್ಗದರ್ಶನವನ್ನು ನಿರೀಕ್ಷಿಸುತ್ತಿದೆ. ಇದಕ್ಕೆ ಕಾರಣ ನಮ್ಮ ದೇಶದ ಸುಭದ್ರ ಹಾಗೂ ಬಲಿಷ್ಟ ರಕ್ಷಣಾ ವಲಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಿಆರ್‍ಡಿಓ ನಡೆಸುವ ಸಂಶೋಧನೆ ಹಾಗೂ ಪರೀಕ್ಷೆಗಳು ಯಶಸ್ವಿಯಾಗಿ, ದೇಶದ ಶಕ್ತಿಯನ್ನು ವೃದ್ಧಿಸಲು ಹಾಗೂ ಬಲಿಷ್ಟಗೊಳಿಸುವಲ್ಲಿ ಸಹಕರಿಸಲಿದೆ. ಡಿಆರ್‍ಡಿಓ ಎಲ್ಲ ಸಂಶೋಧನೆಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದರು.  

ಎಫ್‍ಸಿಎಸ್ ಕಟ್ಟಡ ಒಂದು ಚಮತ್ಕಾರ: ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಮಾದರಿ ಹಾಗೂ ಅದರ ತಂತ್ರಜ್ಞಾನವನ್ನು ಬಳಸಿ ರಾಜ್ಯದಲ್ಲಿ ನಿರ್ಮಾಣ ಕಾರ್ಯಗಳನ್ನು ಮಾಡುವ ಮೂಲಕ ಸಂಪನ್ಮೂಲ ಹಾಗೂ ಸಮಯದ ಮಿತವ್ಯಯ ಮಾಡಬಹುದಾಗಿದೆ. ನವಭಾರತಕ್ಕಾಗಿ ನವ ಕರ್ನಾಟಕ ನಿರ್ಮಿಸುವ ಸರಕಾರದ ಆಶಯದಲ್ಲಿ ಡಿಆರ್‍ಡಿಓ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಕೇವಲ 45 ದಿನಗಳಲ್ಲಿ ನಿರ್ಮಿಸಿರುವ ಫ್ಲೈಟ್ ಕಂಟ್ರೋಲ್ ಸಿಸ್ಟಂ ಒಂದು ಚಮತ್ಕಾರವಾಗಿದೆ. ಒಂದು ಟೆಂಡರ್ ಪ್ರಕ್ರಿಯೆ ಅವಧಿಯಲ್ಲಿ 6 ಮಹಡಿ ಕಟ್ಟಡವನ್ನು ಕಟ್ಟಿರುವುದು ಯಾವುದೇ ಚಮತ್ಕಾರಕ್ಕಿಂತಲೂ ಕಡಿಮೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. 

ಆತ್ಮನಿರ್ಭರತೆ: ಯೋಜನೆಯೂ ಸೇರಿದಂತೆ ಈ ಕಟ್ಟಡ ನಿರ್ಮಾಣಕ್ಕೆ 65 ದಿನಗಳೊಳಗಾಗಿ ಅತ್ಯುತ್ತಮ ಕಟ್ಟಡವನ್ನು ನಿರ್ಮಿಸಲಾಗಿದೆ. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಗೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು ಇಂದು ನನಸಾಗಿದೆ. ಖಾಸಗಿಯವರೊಂದಿಗೆ ಸಮನ್ವಯ, ತಂತ್ರಜ್ಞಾನ, ಆರ್ ಅಂಡ್ ಡಿ ಮುಂತಾವುಗಳನ್ನು ಖಾಸಗಿ ವಲಯದಲ್ಲಿ ಬಳಕೆ ಮಾಡಬಹುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಕ್ಷಣಾ ಸಚಿವರ ಬದ್ಧತೆ: ವಿಶ್ವದಲ್ಲಿಯೇ ಅತ್ಯಂತ ದಕ್ಷ ನಿರ್ಮಾಣ ಸಂಸ್ಥೆಯಾಗಿರುವ ಎಲ್ ಟಂಡ್ ಟಿ ಸಂಸ್ಥೆಯು ರಕ್ಷಣಾ ಸಂಸ್ಥೆಗಳ ಅಗತ್ಯಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ರಾಜನಾಥ್ ಸಿಂಗ್ ಅವರು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸುವವರು. ನುಡಿದಂತೆ ನಡೆಯುವ ಸ್ವಭಾವದವರು. ಭಾರತಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿಯೂ ಅವರು ರಾಜಿ ಮಾಡಿಕೊಳ್ಳುವುದಿಲ್ಲ. ಇದು ಭಾರತದಂಥ ದೊಡ್ಡ ದೇಶಗಳಿಗೆ ಅಗತ್ಯವೂ ಹೌದು. ಅವರ ಬದ್ಧತೆಯಿಂದ ಈ ಕಟ್ಟಡ ನಿರ್ಮಾಣ ಸಾಧ್ಯವಾಗಿದೆ ಎಂದು ಅವರು ಹೇಳಿದರು.

ರಾಜ್ಯವು ತನ್ನ ಸಮರ್ಥ ಹಾಗೂ ದಕ್ಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಅತಿ ಶೀಘ್ರದಲ್ಲಿಯೇ ವಿಶ್ವದಲ್ಲಿ ತನ್ನ ಅಸ್ಮಿತೆಯನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದರು.
ದೇಶದ ಪ್ರಗತಿಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರಿಗಿರುವ ಬದ್ದತೆ ಪ್ರಶ್ನಾತೀತವಾಗಿದೆ.

ಕರ್ನಾಟಕ ಹಾಗೂ  ರಾಜಧಾನಿ  ಬೆಂಗಳೂರು  ಯಾವಾಗಲೂ ನಮ್ಮ ಹೃದಯಕ್ಕೆ ಬಹಳ ಹತ್ತಿರ. ಈ ರಾಜ್ಯ ವಿಶಾಲವಾದ ಆಲದ ಮರವಿದ್ದಂತೆ. ತನ್ನ ಸಂಸ್ಕೃತಿ ಹಾಗೂ ಪರಂಪರೆಯ ಬೇರುಗಳನ್ನು ನೆಲದಾಳಕ್ಕೆ ಬಿಟ್ಟಿದ್ದರೆ, ಆಧುನಿಕ ತಂತ್ರಜ್ಞಾನ ಅಭಿವೃದ್ಧಿಗೆ ಪ್ರಮುಖ ಕೇಂದ್ರವೂ ಆಗಿದ್ದು, ಆಕಾಶದೆತ್ತರಕ್ಕೆ ತನ್ನ ಶಾಖೆಗಳನ್ನು ಚಾಚಿದೆ ಎಂದು ಅವರು ಹೇಳಿದರು. 

ಎಫ್.ಸಿ.ಎಸ್ ಕಟ್ಟಡವನ್ನು ಅತ್ಯುತ್ತಮವಾಗಿ ಶ್ರದ್ಧೆಯಿಂದ ಕಟ್ಟಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕೇವಲ 45 ದಿನಗಳಲ್ಲಿ ಕಟ್ಟಡ ನಿರ್ಮಾಣವಾಗಿರುವುದು  ಶ್ಲಾಘನೀಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X