ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಬೈಕ್ ಸವಾರರಿಬ್ಬರು ಮೃತ್ಯು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು, ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಗರ್ಡಾಡಿ ಸಮೀಪದ ನಂದಿಬೆಟ್ಟ ಬಳಿ ಶುಕ್ರವಾರ ಸಂಜೆಯ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ ಅಬ್ದುರ್ರಝಾಕ್ ಎಂಬವರ ಪುತ್ರರಾದ ಸಿರಾಜ್ ಮತ್ತು ಕುತುಬುದ್ದೀನ್ ಸಾದಿಕ್ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Next Story





.jpeg)

