ದೇಶದಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ: ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಮೈಸೂರು,ಮಾ.18: 'ದೇಶದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿಗೆ ತಲುಪಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡುತ್ತಿದ್ದಾರೆ' ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು.
ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ. ಕಾಂಗ್ರೆಸ್ ಪಕ್ಷವನ್ನ ಜನರು ತಿರಸ್ಕಾರ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರು ಸೋತು ಹತಾಶರಾಗಿದ್ದು, ಉತ್ತರಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿಯವರು ಹೋಗಿ ಏನು ಮಾಡಲಾಗಲಿಲ್ಲ ಎಂದು ಲೇವಡಿ ಮಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಸಂಸದ ವಿ.ಶ್ರೀನಿವಾಸ ಪ್ರಸಾದ್, ಧ್ರುವನಾರಾಯಣ್ ಒಬ್ಬ ಮುಠ್ಠಾಳ. ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ಎಲ್ಲರ ಮೇಲೆ ಚಾಡಿ ಹೇಳಿಕೊಂಡು ತಿರುಗಾಡುತ್ತಾನೆ. ಆತ ಮೇಕೆ ಮೇಯಿಸಲು ಲಾಯಕ್ಕು ಮೇಕೆದಾಟು ಕಾರ್ಯಕ್ರಮದಲ್ಲಿ ಬರುವ ಕಾರ್ಯಕರ್ತರಿಗೆ ಪಲಾವ್ ಮಾಡಿಸಿ ಹಂಚುವ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ,ಶಿವಕುಮಾರ್ ಅವರಿಗೆ ನೀಡಿದ್ದರು ಎಂದು ವ್ಯಂಗ್ಯವಾಡಿದರು.
ನಂಜನಗೂಡಿಗೆ ಶ್ರೀನಿವಾಸ ಪ್ರಸಾದ್ ಯಾವ ರೀತಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ನೋಡಿ ತಿಳಿಯಲಿ. ಬೇಕಿದ್ದರೆ ಅವರೇ ಹೋಗಿ ನೋಡಲಿ. ಜೆಡಿಎಸ್ ಜೊತೆ ಮೈತ್ರಿಗೆ ಹೋಗದಿದ್ದರೆ ಆರ್.ಧ್ರುವನಾರಾಯಣ್ ಸ್ಥಿತಿ ಏನಾಗುತ್ತಿತ್ತೊ ಎಂದು ಹೇಳಿದರು.







