ಮಾ. 28,29: ಸಾರ್ವತ್ರಿಕ ಮುಷ್ಕರ
ಮಂಗಳೂರು: ಕಾರ್ಪೊರೇಟ್ ಪರ ೪ ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ, ಬೆಲೆಯೇರಿಕೆ ನಿಯಂತ್ರಣಕ್ಕಾಗಿ, ಸಂವಿಧಾನದ ಪ್ರಜಾಪ್ರಭುತ್ವ ಮೌಲ್ಯಗಳ ಉಳಿವಿಗಾಗಿ, ೨೪,೦೦೦ ರೂ. ಸಮಾನ ಕನಿಷ್ಠ ವೇತನಕ್ಕಾಗಿ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆಗಾಗಿ ಭಾರತ ಉಳಿಸಿ, ಜನತೆಯನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮಾ.೨೮,೨೯ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ.
ಮಾ.29ರಂದು ಬೆಳಗ್ಗೆ ೧೦ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಮಿಕರ ಮೆರವಣಿಗೆ ಹೊರಟು ೧೦:೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಯಲಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಪ್ರಕಟನೆಯಲ್ಲಿ ತಿಳಿಸಿದೆ.
Next Story