ಮಂಗಳೂರು; ಚಿನ್ನ ಅಕ್ರಮ ಸಾಗಾಟ ಆರೋಪ: ಓರ್ವ ಸೆರೆ
ಮಂಗಳೂರು : ವ್ಯಕ್ತಿಯೊಬ್ಬ ಗುದನಾಳದಲ್ಲಿ ಬಚ್ಚಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ೩೬,೫೩,೫೫೦ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿದ್ದಾರೆ.
ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುವ ವೇಳೆ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಲಾಯಿತು. ಆರೋಪಿ ಪೇಸ್ಟ್ ರೂಪದಲ್ಲಿ ೨೪ ಕ್ಯಾರೆಟ್‌ನ ೭೦೬ ಗ್ರಾಂ ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





