Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀತಿ ಶಿಕ್ಷಣದ ಹೆಸರಲ್ಲಿ ಕೋಮು...

ನೀತಿ ಶಿಕ್ಷಣದ ಹೆಸರಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಯತ್ನ: ವೆಲ್ಫೇರ್ ಪಾರ್ಟಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ19 March 2022 9:10 PM IST
share
ನೀತಿ ಶಿಕ್ಷಣದ ಹೆಸರಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಯತ್ನ: ವೆಲ್ಫೇರ್ ಪಾರ್ಟಿ ಖಂಡನೆ

ಬೆಂಗಳೂರು, ಮಾ.19: ಕಳೆದ ಎರಡು ವರ್ಷಗಳಿಂದ ಕೊರೋನ ಮಹಾಮಾರಿ ಪರಿಣಾಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೋಮುವಾದಿ ಅಜೆಂಡಾವನ್ನು ಕ್ರಮೇಣ ಜಾರಿಗೆ ತರುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೀರ್ ಹುಸೇನ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮವಸ್ತ್ರ, ಹಿಜಾಬ್, ದಿ ಕಾಶ್ಮೀರ ಫೈಲ್ ಚಲನಚಿತ್ರ ಬಳಿಕ ಈ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸಲು ಬಿಜೆಪಿ ಸರಕಾರ ಮುಂದಾಗುವ ಮೂಲಕ ತನ್ನ ಕೋಮುವಾದಿ ಅಜೆಂಡಾ ಮುಂದುವರಿಸಿದೆ.

ಕೋಮು ಸೌಹಾರ್ದತೆಗೆ ಧಕ್ಕೆ ತರುವ ಜೊತೆಗೆ ಮಕ್ಕಳಲ್ಲಿ ಧಾರ್ಮಿಕ ಅಸಹಿಷ್ಣುತೆ ಉಂಟಾಗಲು ಇದು ಕಾರಣವಾಗುತ್ತದೆ ಎಂದು ಹೇಳಿದರು.
ಭಗವದ್ಗೀತೆಯ ಪಠ್ಯ ಸೇರ್ಪಡೆ ಮಾಡುವ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಆದರೆ ಅದರ ಜೊತೆಗೆ ಕುರ್‍ಆನ್, ಬೈಬಲ್, ವಚನ ಸಾಹಿತ್ಯ ಇತ್ಯಾದಿ ಧಾರ್ಮಿಕ ಗ್ರಂಥಗಳ ಶಿಕ್ಷಣವನ್ನೂ ಅಳವಡಿಸಿ. ಧಾರ್ಮಿಕ ಮೌಲ್ಯಗಳನ್ನು ಶಿಕ್ಷಣದ ಭಾಗವಾಗಿಸುವುದರ ಜತೆಗೆ ಧಾರ್ಮಿಕ ಚಿಹ್ನೆಗಳಿಗೂ ಅನುಮತಿ ನೀಡಬೇಕು. ಆಗ ಮಾತ್ರ ಈ ಕ್ರಮ ಸಮರ್ಥನೀಯ ಎಂದು ಅವರು ಅಭಿಪ್ರಾಯಪಟ್ಟರು.

ಧರ್ಮಾತೀತ, ಜಾತ್ಯತೀತವಾಗಿ ಶಿಕ್ಷಣ ಇರಬೇಕು ಎನ್ನುವ ಸಂವಿಧಾನದ ತಿರುಳನ್ನು ಅರಿಯದೇ ಬಿಜೆಪಿ ಸಚಿವರು ತಾರತಮ್ಯ ನೀತಿ ಅನುಸರಿಸುತ್ತಿರುವುದು ಖಂಡನಿಯ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕೊಠಡಿಗಳು, ಶೌಚಾಲಯಗಳು, ಆಟದ ಮೈದಾನಗಳು, ಆಟದ ಸಾಮಗ್ರಿಗಳು, ಪೀಠೋಪಕರಣಗಳನ್ನು ಸಮರ್ಪಕವಾಗಿ ಪೂರೈಸಲು ಸರಕಾರ ಮುಂದಾಗುವ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಗುಣಮಟ್ಟದ ಶಿಕ್ಷಣ ನೀಡಬೇಕೆ ಹೊರತು, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಕೆಲಸಕ್ಕೆ ಮುಂದಾಗಬಾರದು ಎಂದು ತಾಹೀರ್ ಹುಸೇನ್ ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮು ವಾದವನ್ನು ಬಳಸಿಕೊಂಡು ರಾಜ್ಯದಲ್ಲಿ ಒಂದಿಲ್ಲೊಂದು ಅವಘಡಗಳು ನಡೆಯುತ್ತಲೆ ಇವೆ. ಸರ್ವೇಜನ ಸುಖಿನೋ ಭವಂತು ಎನ್ನುವ ಮಾತನ್ನು ಸರಕಾರ ಅಕ್ಷರಶಃ ಮರೆತು ಕೇವಲ ಧಾರ್ಮಿಕ ಮನೋಭಾವನೆಯನ್ನು ಒತ್ತಾಯಪೂರ್ವಕವಾಗಿ ಮಕ್ಕಳ ಮೇಲೆ ಹೇರಲು ಹೊರಟಿರುವ ಕ್ರಮ ಖಂಡನೀಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮತಾಂಧತೆಯ ವಿಚಾರಗಳನ್ನು ಕೈಬಿಟ್ಟು ಮಕ್ಕಳಲ್ಲಿ ಜಾತ್ಯತೀತ ಮನೋಭಾವ ಬೆಳೆಸುವ ಪಠ್ಯಕ್ರಮದ ಜೊತೆಗೆ ಮಕ್ಕಳ ಆರೋಗ್ಯ, ಶಾಲೆಗಳಿಗೆ ಬೇಕಾದ ಸೌಲಭ್ಯಗಳನ್ನು ನೀಡಲು ಸರಕಾರ ಮುಂದಾಗಬೇಕು ಎಂದು ತಾಹೀರ್ ಹುಸೇನ್ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X