ಉಡುಪಿ ಪ್ರಸಾದ್ ನೇತ್ರಾಲಯಕ್ಕೆ ವಾಹನ ಹಸ್ತಾಂತರ

ಉಡುಪಿ : ಉಡುಪಿ ಕೆನರಾ ಬ್ಯಾಂಕಿನ ಸಿಎಸ್‌ಆರ್ ಯೋಜನೆ ಯಡಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್‌ಗೆ ಕೊಡುಗೆಯಾಗಿ ನೀಡಲಾದ ವಾಹನ ವನ್ನು ಶನಿವಾರ ಹಸ್ತಾಂತರಿಸಲಾಯಿತು.
ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಣಿಪಾಲ ಸರ್ಕಲ್‌ನ ಜನರಲ್ ಮೆನೇಜರ್ ರಾಮ ಕೆ.ನಾಕ್, ಉಡುಪಿ ಶಾಸಕ ಕೆ.ರಘುಪತಿ ಭಟ್ ಮೂಲಕ ಆಸ್ಪತ್ರೆಗೆ ವಾಹನವನ್ನು ಹಸ್ತಾಂತರಿಸಿದರು. ಅಧ್ಯಕ್ಷತೆಯನ್ನು ಟ್ರಸ್ಟ್‌ನ ಕೆ.ರಘುರಾಮ್ ರಾವ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಕೆನರಾ ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯ ಡೆಪ್ಯುಟಿ ಜನರಲ್ ಮೆನೇಜರ್ ಲೀನಾ ಪಿಂಟೋ, ಸಮಾಜ ಸೇವಕರಾದ ಸುರೇಶ್ ಶೆಟ್ಟಿ ಗುರ್ಮೆ, ಮಹೇಶ್ ಠಾಕೂರ್ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
Next Story





