Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮುಸ್ಲಿಂ ವಿದ್ಯಾರ್ಥಿಗಳ ‘ಮಾಹಿತಿ’...

ಮುಸ್ಲಿಂ ವಿದ್ಯಾರ್ಥಿಗಳ ‘ಮಾಹಿತಿ’ ಕಲೆಹಾಕುತ್ತಿರುವ ರಾಜ್ಯ ಸರಕಾರ

ಜಿ.ಮಹಾಂತೇಶ್ಜಿ.ಮಹಾಂತೇಶ್20 March 2022 7:44 AM IST
share
ಮುಸ್ಲಿಂ ವಿದ್ಯಾರ್ಥಿಗಳ ‘ಮಾಹಿತಿ’ ಕಲೆಹಾಕುತ್ತಿರುವ ರಾಜ್ಯ ಸರಕಾರ

 ರಾಜ್ಯದ ಸರಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಮ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಒಟ್ಟಾರೆ ಸಂಖ್ಯಾಬಲದ ಕುರಿತು ಮಾಹಿತಿ ಕಲೆ ಹಾಕುತ್ತಿದೆ. ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ ನಂತರ ಮುಸ್ಲಿಮ್ ವಿದ್ಯಾರ್ಥಿನಿಯರ ಪೈಕಿ ಎಷ್ಟು ಮಂದಿ ಹಿಜಾಬ್ ಧರಿಸಲು ಬೇಡಿಕೆ ಇರಿಸಿದ್ದಾರೆ ಮತ್ತು ಹಿಜಾಬ್ ಧರಿಸಲು ನಿರಾಕರಿಸಿರುವ ವಿದ್ಯಾರ್ಥಿನಿಯರ ಸಂಖ್ಯೆ ಕಲೆ ಹಾಕಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಗೊತ್ತಾಗಿದೆ.

ಬೆಂಗಳೂರು, ಮಾ.19: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳ ಪರ ವಕೀಲರು ಸುಪ್ರೀಂ ಕೋರ್ಟ್‌ಗೆಮೊರೆ ಹೋಗಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇದೀಗ ಮುಸ್ಲಿಮ್ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾ ಖೆಯ ಉನ್ನತ ಮೂಲಗಳು ‘the-file.in’ ಗೆ ಖಚಿತಪಡಿಸಿವೆ. ರಾಜ್ಯದಲ್ಲಿರುವ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಲ್ಲಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯ ಕುರಿತು ಮಾಹಿತಿ ಕಲೆ ಹಾಕುವುದರ ಜತೆಯಲ್ಲಿಯೇ ಮುಸ್ಲಿಮ್ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನೂ ಸಂಗ್ರಹಿಸಲಿದೆ ಎಂದು ತಿಳಿದು ಬಂದಿದೆ. ವಿಶೇಷವಾಗಿ ಉಡುಪಿ, ಕುಂದಾಪುರದಲ್ಲಿನ ಒಟ್ಟಾರೆ ವಿದ್ಯಾರ್ಥಿಗಳು ಮತ್ತು ಮುಸ್ಲಿಮ್ ವಿದ್ಯಾರ್ಥಿಗಳ ಸಂಖ್ಯೆಯನ್ನು ತುರ್ತಾಗಿ ಕಲೆ ಹಾಕಲು ಸೂಚಿಸಿದೆ ಎಂದು ತಿಳಿದು ಬಂದಿದೆ.

 ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದಕ್ಕೆ ನಿರ್ಬಂಧ ವಿಧಿಸಿರುವ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್‌ನ ವಿಶೇಷ ಪೀಠ ಎತ್ತಿ ಹಿಡಿದಿತ್ತು. ಇಸ್ಲಾಮ್‌ನಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಳೆದ ಗುರುವಾರವಷ್ಟೇ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಲಾಗಿದೆ.

ಸಾಜಿದಾ ಬೇಗಂ ಅವರು ವಕೀಲರಾದ ತಲ್ಹಾ ಅಬ್ದುಲ್ ರಹಮಾನ್ ಮತ್ತು ಇತರರ ಮೂಲಕ ಸಲ್ಲಿಸಿದ ಹೊಸ ಅರ್ಜಿಯಲ್ಲಿ, ಹದಿಹರೆಯದ ಹುಡುಗಿಯರು ಹಿಜಾಬ್ ಧರಿಸುವುದರಿಂದ ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದರು. ಸರಕಾರಿ ಆದೇಶ ಹಿಜಾಬ್ ನಿಷೇಧಿಸುವುದಿಲ್ಲ ವಾದ್ದರಿಂದ ಹೈಕೋರ್ಟ್ ಆಡಳಿತತಾತ್ಮಕ ಕಾನೂನಿನ ಸರಳ ಅಂಶದ ಮೇಲೆ ಮಾತ್ರ ಸಮಸ್ಯೆಯನ್ನು ನಿರ್ಧರಿಸಬೇಕಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕ ಸರಕಾರದ ಆದೇಶವನ್ನು ಪುರಸ್ಕರಿಸಿ ತೀರ್ಪು ನೀಡಿದ್ದ ಹೈಕೋರ್ಟ್‌ನ ಆದೇಶಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X