ಪಾವಗಡ ಬಸ್ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹಸಚಿವ

ತುಮಕೂರು, ಮಾ.20: ಗೃಹಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ರವಿವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪಾವಗಡದ ಪಳವಳ್ಳಿಯಲ್ಲಿ ಶನಿವಾರ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ. ಶಹಪೂರವಾಡ್, ಡಿಎಚ್‌ಒ ಡಾ.ನಾಗೇಂದ್ರಪ್ಪ ಉಪಸ್ಥಿತರಿದ್ದರು.
ಈ ಬಸ್ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

Next Story





