ನಾಗೂರು: ವಿದ್ಯಾಪೋಷಕ್‌ನ 24ನೇ ಮನೆ ಹಸ್ತಾಂತರ

ಉಡುಪಿ : ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್ ಫಲಾನುಭವಿ ಅಕ್ಷಯ್ ಕುಮಾರ್ ಮತ್ತು ಅವರ ತಂದೆ ಯಕ್ಷಗಾನ ಹಿಮ್ಮೇಳ ವಾದಕ ಹೆರಂಜಾಲು ಬಾಲಕೃಷ್ಣ ಗಾಣಿಗ ಇವರಿಗೆ ನಾಗೂರಿನಲ್ಲಿ ನಿರ್ಮಿಸಿಕೊಟ್ಟ ಮನೆ ‘ಸಾಯಿಮಯಿ’ಯ ಹಸ್ತಾಂತರ ಕಾರ್ಯಕ್ರಮ ರವಿವಾರ ಜರಗಿತು.
ಪ್ರಾಯೋಜಕರಾದ ಮಂಗಳೂರಿನ ವೈದ್ಯ ಡಾ.ಜೆ.ಎನ್.ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ದಾನಿ ಪಿ.ಗೋಕುಲನಾಥ ಪ್ರಭು ಮಾತನಾಡಿದರು. ಯು.ವಿಶ್ವನಾಥ ಶೆಣೈ, ಉಪಾಧ್ಯಕ್ಷ ಎಸ್. ವಿ.ಭಟ್, ವಿ.ಜಿ.ಶೆಟ್ಟಿ, ಕಲಾವಿದ ಹೆರಂಜಾಲು ಗೋಪಾಲ ಗಾಣಿಗ ಉಪಸ್ಥಿತರಿದ್ದರು.
ಪ್ರೊ.ಎಂ.ಎಲ್.ಸಾಮಗ ಪ್ರಾಯೋಜಕರನ್ನು ಪರಿಚಯಿಸಿದರು. ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಜತೆಕಾರ್ಯದರ್ಶಿ ಪ್ರೊ. ನಾರಾಯಣ ಎಂ.ಹೆಗಡೆ ವಂದಿಸಿದರು. ಇದು ಯಕ್ಷಗಾನ ಕಲಾರಂಗ ವಿದ್ಯಾ ಪೋಷಕ್ ವಿದ್ಯಾರ್ಥಿಗಳಿಗೆ ನಿರ್ಮಿಸಿದ 24ನೇ ಮನೆಯಾಗಿದೆ.
Next Story