Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಪುನೀತ್ ಸೇರಿ 60 ಸಾಧಕರಿಗೆ ‘ಸಹಕಾರ...

ನಟ ಪುನೀತ್ ಸೇರಿ 60 ಸಾಧಕರಿಗೆ ‘ಸಹಕಾರ ರತ್ನ ಪ್ರಶಸಿ' ಪ್ರದಾನ

ವಾರ್ತಾಭಾರತಿವಾರ್ತಾಭಾರತಿ20 March 2022 5:28 PM IST
share
ನಟ ಪುನೀತ್ ಸೇರಿ 60 ಸಾಧಕರಿಗೆ ‘ಸಹಕಾರ ರತ್ನ ಪ್ರಶಸಿ ಪ್ರದಾನ

ಬೆಂಗಳೂರು, ಮಾ. 20: ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‍ಕುಮಾರ್ ಹಾಗೂ ಹಿರಿಯ ಸಹಕಾರಿ ಕರೇಗೌಡ ಸಿದ್ದಲಿಂಗಪ್ಪ ಗೌಡ ಸಣ್ಣಗೌಡ(ಮರಣೋತ್ತರ) ಸೇರಿ ರಾಜ್ಯದ 60 ಜನ ಮಹನೀಯರಿಗೆ ಪ್ರಸ್ತುತ ಸಾಲಿನ ಸಹಕಾರ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದಾನ ಮಾಡಿ ಗೌರವಿಸಿದರು. 

ರವಿವಾರ ಬೆಂಗಳೂರಿನ ಕೆಂಗೇರಿಯ ಗಣೇಶ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕಣಜಕ್ಕೆ ಭತ್ತದ ತೆನೆ ತುಂಬಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕರ್ನಾಟಕ ಸಹಕಾರ ಮಹಾ ಮಂಡಳ, ಸಹಕಾರ ವಸತಿ ಮಹಾ ಮಂಡಳ ಮತ್ತು ಸಹಕಾರ ಇಲಾಖೆ ಜಂಟಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿತ್ತು. ಪ್ರತಿ ಜಿಲ್ಲೆಗೆ ಇಬ್ಬರು ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಹಕಾರ ರತ್ನ ಪ್ರಶಸ್ತಿಗೆ ಯಾವುದೇ ರೀತಿಯ ಪ್ರಭಾವ ಬಳಸಬಾರದು. ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದರು. ಅದರಂತೆ 60 ಸಹಕಾರಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. 

ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಸಹಕಾರ ಕ್ಷೇತ್ರಕ್ಕೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. ಎಲ್ಲ ರೀತಿಯಲ್ಲೂ ನೆರವು ಒದಗಿಸಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಬಜೆಟ್‍ನಲ್ಲಿ ಸಹಕಾರ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಪ್ರತಿ ತಾಲೂಕಿನಲ್ಲೂ ಕ್ಷೀರ ಸಮೃದ್ಧಿ ಬ್ಯಾಂಕ್‍ಗಳನ್ನು ಹಾಲು ಉತ್ಪಾದಕರಿಗಾಗಿ ಆರಂಭಿಸಲಾಗುತ್ತಿದೆ. ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡುವ ಸಹಕಾರಿಗಳ ಬೇಡಿಕೆಗೆ ಸರಕಾರ ಸ್ಪಂದಿಸಿ ಬಜೆಟ್‍ನಲ್ಲಿ ಯಶಸ್ವಿನಿ ಯೋಜನೆಯ ಜಾರಿ ಘೋಷಣೆ ಮಾಡಲಾಗಿದ್ದು, ಈ ಯೋಜನೆಗಾಗಿ 300 ಕೋಟಿ ರೂ.ಬಜೆಟ್‍ನಲ್ಲಿ ಮೀಸಲಿರಿಸಲಾಗಿದೆ ಎಂದರು.

ದೇಶದಲ್ಲಿ ಹಸಿರು ಕ್ರಾಂತಿಯಾಗಿದೆ. ಆದರೆ, ಕೃಷಿಗೆ ತಕ್ಕಂತೆ ರೈತ ಅಭಿವೃದ್ಧಿಯಾಗಿಲ್ಲ. ರೈತನ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿರವರು ಆದಾಯ ದ್ವಿಗುಣಗೊಳಿಸಲು ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಇದೇ ದಾರಿಯಲ್ಲಿ ರಾಜ್ಯ ಸರಕಾರವು ಮುನ್ನಡೆದಿದ್ದು, ರೈತನ ಸವಾರ್ಂಗೀಣ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದರು.

ಬಿಎಸ್‍ವೈ ಸಿಎಂ ಆಗಿದ್ದಾಗ ರೈತರ 10 ಹೆಚ್‍ಪಿ ನೀರಾವರಿ ಪಂಪ್ ಸೆಟ್‍ಗಳಿಗೆ ಉಚಿತ ವಿದ್ಯುತ್ ಘೋಷಣೆ ಮಾಡಿದ್ದರು. ಕೇಂದ್ರ ಕಿಸಾನ್ ಸಮ್ಮಾನ್ ಯೋಜನೆಗೆ ಬೆಂಬಲವಾಗಿ ರಾಜ್ಯ ಸರಕಾರದಿಂದಲೂ 4 ಸಾವಿರ ರೂ.ಗಳನ್ನು ರೈತರಿಗೆ ನೀಡುವ ಯೋಜನೆಯನ್ನೂ ಜಾರಿ ಮಾಡಿದ್ದರು. ಸಹಕಾರ ಕ್ಷೇತ್ರ ಬೆಳೆಯಬೇಕು, ಸಹಕಾರಿಗಳ ಜತೆ ಪ್ರತಿ ಹಂತದಲ್ಲೂ ನಾನು ಇರುತ್ತೇನೆ, ಇನ್ನೂ ಉತ್ತಮವಾಗಿ ಕೆಲಸ ಮಾಡಿ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ, ಸಹಕಾರಿ ಸಂಘದಲ್ಲಿ ದುಡಿಮೆ ಮುಖ್ಯ, ಇಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಸರಕಾರವೇ ಸದಸ್ಯತ್ವ ನೋಂದಣಿ ಹಣವನ್ನು ನೀಡುತ್ತದೆ. ಅಲ್ಲದೆ, ಸಹಕಾರಿಗಳಿಗೆ ದೊಡ್ಡ ಮಟ್ಟದಲ್ಲಿ ಅವಕಾಶಗಳಿವೆ. ದೇಶದ ಗೃಹಮಂತ್ರಿ ಅಮಿತ್ ಶಾ ಕೂಡ ಸಹಕಾರ ರಂಗದಿಂದಲೇ ಬಂದವರು, ಸಹಕಾರದ ಮಹತ್ವ ತಿಳಿದುಕೊಂಡರೆ ಬದುಕು ಸುಲಭವಾಗುತ್ತದೆ. ಸಹಕಾರವಿಲ್ಲದಿದ್ದರೆ ಪ್ರಗತಿ ಸಾಧ್ಯವಿಲ್ಲ. ಸಹಕಾರ ಎನ್ನುವುದು ಬದುಕಿನ ಒಂದು ಭಾಗ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ಆರಗ ಜ್ವಾನೇಂದ್ರ, ಆನಂದ್‍ಸಿಂಗ್, ಕೆ. ಗೋಪಾಲಯ್ಯ, ಭೈರತಿ ಬಸವರಾಜು, ಡಾ.ಕೆ.ಸುಧಾಕರ್, ಗೋವಿಂದ ಕಾರಜೋಳ, ಸಂಸದ ಡಿ.ವಿ. ಸದಾನಂದಗೌಡ. ಸಹಕಾರ ಮಹಾ ಮಂಡಳ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ವಿವಿಧ ಸಹಕಾರ ಮಂಡಳಗಳ ಪದಾಧಿಕಾರಿಗಳೂ ಸೇರಿ ಹಲವರು ಉಪಸ್ಥಿತರಿದ್ದರು. 

ಸಹಕಾರ ಕ್ಷೇತ್ರದ ಮೂಲಕ ರೈತರಿಗೆ ನೆರವು: ‘ರೈತರ ಯಂತ್ರೋಪಕರಣಗಳ ಪೆಟ್ರೋಲ್-ಡೀಸೆಲ್ ಸಬ್ಸಿಡಿಗೆ 500 ಕೋಟಿ ರೂ. ಬಜೆಟ್‍ನಲ್ಲಿ ಒದಗಿಸಲಾಗಿದೆ. 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗಿದೆ. ಕೃಷಿ ಆರ್ಥಿಕತೆಯ ಮೂಲವಾಗಿದೆ. ರೈತರು ಉತ್ಪಾದಕರಲ್ಲ ಅವರು ಬಳಕೆದಾರರೂ ಕೂಡ. ಹೀಗಾಗಿ, ರೈತರ ಕಲ್ಯಾಣಕ್ಕೆ ಸರಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಸಹಕಾರ ಕ್ಷೇತ್ರದ ಮೂಲಕ ರೈತರಿಗೆ ನೆರವನ್ನು ಒದಗಿಸಲಾಗುತ್ತಿದೆ.’

-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X