ಇಂಡಿಯನ್ ಸೂಪರ್ ಲೀಗ್: ಹೈದರಾಬಾದ್ ಚಾಂಪಿಯನ್

ಹೊಸದಿಲ್ಲಿ, ಮಾ.20: ಕೇರಳ ಬ್ಲಾಸ್ಟರ್ಸ್ ತಂಡವನ್ನು ಪೆನಾಲ್ಟಿ ಪೆನಾಲ್ಟಿ ಶೂಟೌಟ್ ನಲ್ಲಿ ಸೋಲಿಸಿದ ಹೈದರಾಬಾದ್ ಎಫ್‌ಸಿ ಮೊದಲ ಬಾರಿ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್)ನಲ್ಲಿ ಚಾಂಪಿಯನ್‌ಪಟ್ಟ ಅಲಂಕರಿಸಿದೆ.
ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ನಿಗದಿತ ಸಮಯದಲ್ಲಿ 1-1ರಿಂದ ಸಮಬಲ ಸಾಧಿಸಿದವು. ಆಗ ಫಲಿತಾಂಶ ನಿರ್ಧರಿಸಲು ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಪೆನಾಲ್ಟಿಯಲ್ಲಿ ಹೈದರಾಬಾದ್ ತಂಡವು ಕೇರಳವನ್ನು 3-1 ಅಂತರದಿಂದ ಮಣಿಸಿ ಪ್ರಶಸ್ತಿ ಜಯಿಸಿತು.
ಕೇರಳ ಮೂರನೇ ಬಾರಿ ಫೈನಲ್‌ನಲ್ಲಿ ಸ್ಪರ್ಧಿಸಿದರೂ ಪ್ರಶಸ್ತಿಯಿಂದ ವಂಚಿತವಾಯಿತು. ಈ ಹಿಂದೆ 2014 ಹಾಗೂ 2016ರಲ್ಲಿ ಫೈನಲ್ ತಲುಪಿದರೂ ಪ್ರಶಸ್ತಿ ಲಭಿಸಿರಲಿಲ್ಲ.
Next Story





