ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ
ಉಡುಪಿ : ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದ ಐಎಎಸ್, ಐಪಿಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾ ಗುವುದು.
ಆಸಕ್ತ ಅಭ್ಯರ್ಥಿಗಳು ಮಾರ್ಚ್ ೨೯ರೊಳಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ದೂರವಾಣಿ ಸಂಖ್ಯೆ:೦೮೨೧-೨೫೧೫೯೪೪ ಅನ್ನು ಸಂಪರ್ಕಿಸಿ, ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕ.ರಾ.ಮು. ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story