Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ...

ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ21 March 2022 8:40 PM IST
share
ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಮಾ.21: ಡಿಜಿಟಲ್ ಆರ್ಥಿಕತೆಯ ಸುಸ್ಥಿರತೆಗೆ ಸುರಕ್ಷತೆ, ಭದ್ರತೆ ಮತ್ತು ವಿಶ್ವಾಸಾರ್ಹತೆಗಳು ಆಧಾರಸ್ತಂಭಗಳಾಗಿದ್ದು, ನಾವೀನ್ಯತೆ ಕೂಡ ವ್ಯಾಪಕ ಪ್ರಮಾಣದಲ್ಲಿ ನಡೆಯಬೇಕಾಗಿದೆ. ಸೈಬರ್ ವಂಚನೆಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸರಕಾರವು ಶೀಘ್ರದಲ್ಲೇ `ಸೈಬರ್ ಭದ್ರತಾ ನೀತಿ’ಯನ್ನು ಜಾರಿಗೆ ತರಲಿದೆ ಎಂದು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

`ಅಸೋಚಂ’ ಸಂಘಟನೆಯು ವರ್ಚುಯಲ್ ರೂಪದಲ್ಲಿ ಏರ್ಪಡಿಸಿರುವ ಎರಡು ದಿನಗಳ ತನ್ನ 12ನೇ ಜಾಗತಿಕ ಸಮಾವೇಶದಲ್ಲಿ ಸೋಮವಾರ ಅವರು ಮಾತನಾಡಿದರು. ಸಮಾವೇಶದಲ್ಲಿ `ವಂಚನೆಗಳು ಮತ್ತು ವಿಧಿವಿಜ್ಞಾನ: ಮುನ್ನೆಲೆಗೆ ಬರುತ್ತಿರುವ ಪ್ರವೃತ್ತಿಗಳು ಹಾಗೂ ಸವಾಲುಗಳ ನಿಗ್ರಹ’ ಕುರಿತು ಪ್ರಧಾನವಾಗಿ ಚರ್ಚಿಸಲಾಗುತ್ತಿದೆ.

ಉದ್ದೇಶಿತ ಸೈಬರ್ ಭದ್ರತಾ ನೀತಿಯು ಎಲ್ಲ ಆಯಾಮಗಳನ್ನೂ ಪರಿಗಣನೆಗೆ ತೆಗೆದುಕೊಂಡಿದೆ. ಈ ನೀತಿಯು ಜಾರಿಗೆ ಬಂದರೆ ಸರಕಾರದ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಪನ್ಮೂಲಗಳಾದ ರಾಜ್ಯ ದತ್ತಾಂಶ ಕೇಂದ್ರ, ವೈಡ್ ಏರಿಯಾ ನೆಟ್ವರ್ಕ್ ಮತ್ತು ಇ-ಆಡಳಿತ ಸೌಲಭ್ಯಗಳು ಸುರಕ್ಷಿತವಾಗಿರಲಿವೆ ಎಂದು ಅವರು ಹೇಳಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಇತ್ತೀಚಿನ ವರದಿಯಂತೆ 2021-22ರಲ್ಲಿ ದೇಶದ ವಾಣಿಜ್ಯ ಬ್ಯಾಂಕುಗಳಲ್ಲಿ 1.38 ಟ್ರಿಲಿಯನ್ ರೂಪಾಯಿಗಳಷ್ಟು ಅಗಾಧ ಮೊತ್ತವು ಸೈಬರ್ ವಂಚನೆಗೆ ಒಳಗಾಗಿದೆ. ಅದರಲ್ಲೂ ಖಾಸಗಿ ಬ್ಯಾಂಕುಗಳಲ್ಲಿ ಕಾರ್ಡುಗಳು ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ವಂಚನೆಗಳು ಅಗಾಧವಾಗಿ ನಡೆಯುತ್ತಿವೆ. ಇವುಗಳನ್ನು ನಿಗ್ರಹಿಸಬೇಕಾದ್ದು ಈಗಿನ ಜರೂರಾಗಿದೆ ಎಂದು ಅವರು ವಿವರಿಸಿದರು.

ಭಾರತೀಯ ಡೇಟಾ ಸುರಕ್ಷತೆ ಮಂಡಲಿಯ ಪ್ರಕಾರ, ಸೈಬರ್ ಭದ್ರತಾ ಉದ್ಯಮವು ಸದ್ಯಕ್ಕೆ 80 ಶತಕೋಟಿ ಡಾಲರ್ ಮೌಲ್ಯವನ್ನು ಹೊಂದಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದು 190 ಶತಕೋಟಿ ಡಾಲರ್ ಗಾತ್ರಕ್ಕೆ ಬೆಳೆಯಲಿದೆ. ಇಂತಹ ಉದ್ಯಮವನ್ನು ಸುರಕ್ಷತೆಯೊಂದಿಗೆ ಬೆಳೆಸುವುದು ಸರಕಾರದ ಕರ್ತವ್ಯವಾಗಿದೆ ಎಂದು ಅವರು ನುಡಿದರು.

ಇಂಟರ್ನೆಟ್ ಬಳಕೆದಾರರ ಸಂಖ್ಯೆಯು ಕಳೆದ ಐದು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಳಗೊಂಡಿದ್ದು, ಡಿಜಿಟಲ್ ವಹಿವಾಟಿನ ಪ್ರಮಾಣವು ಕಳೆದ ಆರು ವರ್ಷಗಳಲ್ಲಿ 8 ಪಟ್ಟು ಹೆಚ್ಚಿದೆ. ಇದರ ಜತೆಗೆ ಬ್ರಾಡ್-ಬ್ಯಾಂಡ್ ಅಂತರ್ಜಾಲ ಬಳಕೆದಾರರ ಸಂಖ್ಯೆಯು 2016ರಿಂದ 2021ರ ನಡುವೆ ಶೇ.79ಕ್ಕಿಂತ ಹೆಚ್ಚು ಏರಿಕೆ ದಾಖಲಿಸಿದೆ. ಒಟ್ಟಿನಲ್ಲಿ ಸಾರ್ವಜನಿಕರು ವಂಚನೆಯ ಉದ್ದೇಶದ ಮೊಬೈಲ್ ಕರೆಗಳು, ಸಂದೇಶಗಳು, ಅಪರಿಚಿತ ಲಿಂಕ್‍ಗಳು, ಅನಧಿಕೃತ ಕ್ಯೂಆರ್ ಕೋಡ್ ಇತ್ಯಾದಿಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಅಶ್ವತ್ಥನಾರಾಯಣ ಹೇಳಿದರು.

ಕೇಂದ್ರ ಸರಕಾರವು ಕೈಗೆತ್ತಿಕೊಂಡಿರುವ `ಡಿಜಿಟಲ್ ಇಂಡಿಯಾ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಸರಕಾರದ ಆದ್ಯತೆಯಾಗಿದೆ. ಇದಕ್ಕಾಗಿ ಬಳಕೆದಾರರನ್ನು ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಶಿಕ್ಷಿತರನ್ನಾಗಿ ಮಾಡುವುದು ಮತ್ತು ಸರಕಾರ ಹಾಗೂ ಖಾಸಗಿ ವಲಯಗಳೆರಡರಲ್ಲೂ ತಾಂತ್ರಿಕ ಪರಿಣತಿಯನ್ನು ಬೆಳೆಸುವ ಎರಡು ಆಯಾಮಗಳ ಉಪಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದರು.

ಅಸೋಚಮ್ ಪದಾಧಿಕಾರಿಗಳಾದ ಶೋಭಿತ್ ಅಗರವಾಲ್, ಬಸುದೇವ್ ಮುಖರ್ಜಿ, ಐಸಿಎಐ ಮುಖ್ಯಸ್ಥ ಡಾ.ಅಶೋಕ್ ಹಾಲ್ದಿಯಾ, ಸೆಬಿಯ ಮುಖ್ಯ ವಿಚಕ್ಷಣಾಧಿಕಾರಿ ಆರತಿ ಶ್ರೀವಾಸ್ತವ ಮತ್ತಿತರರು ಈ ವರ್ಚುಯಲ್ ಸಮಾವೇಶದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X