ಮಾ. 22: "ಟೋಲ್ ಗೇಟ್ ಚಲೋ" ಜಾಥಾ
ಸುರತ್ಕಲ್, ಮಾ. 21 : ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಎನ್ಐಟಿಕೆ ಟೋಲ್ಗೇಟ್ ಚಲೋ ಬೃಹತ್ ಜಾಥಾವು ಮಾ. 22ರಂದು ನಡೆಯಲಿದೆ.
ಬೃಹತ್ ಜಾಥಾಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು ಬಿತ್ತಿಪತ್ರ ಪ್ರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿವೆ.
ಅಲ್ಲದೆ ಜಾಥಾಕ್ಕೆ ಸಂಬಂಧಿಸಿದಂತೆ ಹೋರಾಟ ಸಮಿತಿಯು ನೂರಕ್ಕೂ ಅಧಿಕ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿಕೊಂಡು ಹಲವು ಸುತ್ತಿನ ಸಭೆಗಳನ್ನು ನಡೆಸಿ ಜಾಥಾಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೆಳಗ್ಗೆ 9.30ಕ್ಕೆ ಹೆಜಮಾಡಿ ಟೋಲ್ಗೇಟ್ ನಿಂದ ಆರಂಭಗೊಳ್ಳುವ ಬೃಹತ್ ಜಾತಾವು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ತಲುಪಿ ಬಳಿಕ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಕಟಣೆ ತಿಳಿಸಿದೆ.
Next Story