ಮಂಗಳೂರು : ಬಾಲಕಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ

ಅಬ್ದುಲ್ ರಾಝೀಕ್
ಮಂಗಳೂರು : ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರಾಝೀಕ್ ಉಳ್ಳಾಲ (44) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ನಂದಿಗುಡ್ಡೆ ಫ್ಲ್ಯಾಟ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದು, ಇಬ್ಬರು ಬಾಲಕಿಯರು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 16 ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





