Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜೇಷ್ಠತೆ ಪಟ್ಟಿಯಲ್ಲಿ ಹಿರಿಯ ಅಧಿಕಾರಿಗಳ...

ಜೇಷ್ಠತೆ ಪಟ್ಟಿಯಲ್ಲಿ ಹಿರಿಯ ಅಧಿಕಾರಿಗಳ ಕಡೆಗಣನೆ: ಆರೋಪ

ನ್ಯಾಯ ಮಂಡಳಿ ಕದ ತಟ್ಟಲು ಮುಂದಾದ ಬಾಧಿತ ಅಧಿಕಾರಿಗಳು

ಜಿ.ಮಹಾಂತೇಶ್ಜಿ.ಮಹಾಂತೇಶ್22 March 2022 8:39 AM IST
share
ಜೇಷ್ಠತೆ ಪಟ್ಟಿಯಲ್ಲಿ ಹಿರಿಯ ಅಧಿಕಾರಿಗಳ ಕಡೆಗಣನೆ: ಆರೋಪ

ಸಚಿವಾಲಯದಲ್ಲಿ ಸಂವಿಧಾನದ ವಿಧಿ 371(ಜೆ) ಅಡಿ ಕಿರಿಯ ಸಹಾಯಕ ಹುದ್ದೆಯಿಂದ ಅಧೀನ ಕಾರ್ಯದರ್ಶಿ ವೃಂದದವರರೆಗೆ ಮಾತ್ರ ಹೈ -ಕ ವೃಂದದಲ್ಲಿ ಭಡ್ತಿಯಲ್ಲಿ ಮೀಸಲಾತಿಗೆ ಅವಕಾಶವಿದೆ. ಮೂಲವೃಂದ ಮತ್ತು ಸ್ಥಳೀಯ ವೃಂದದ ಅಧೀನ ಕಾರ್ಯದರ್ಶಿಗಳಿಗೆ ಉಪ ಕಾರ್ಯದರ್ಶಿ ವೃಂದಕ್ಕೆ ಮುಂಭಡ್ತಿಯನ್ನು ಯಾವ ರೀತಿ ನೀಡಬೇಕು, ಯಾವ ಜೇಷ್ಠತಾ ಪಟ್ಟಿ ಆಧಾರದ ಮೇಲೆ ನೀಡಬೇಕು ಎಂಬ ಬಗ್ಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಿಂದ ಯಾವುದೇ ಆದೇಶಗಳನ್ನು ಹೊರಡಿಸಿಲ್ಲ ಎಂದು ತಿಳಿದು ಬಂದಿದೆ.

ಬೆಂಗಳೂರು, ಮಾ.21: ಕರ್ನಾಟಕ ಸರಕಾರದ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲ ವೃಂದದ ಅಧೀನ ಕಾರ್ಯದರ್ಶಿಗಳು ಜೇಷ್ಠತೆಯಲ್ಲಿ ಹಿರಿಯರಾಗಿದ್ದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬಿಡುಗಡೆ ಮಾಡಿರುವ ಜೇಷ್ಠತೆ ಪಟ್ಟಿಯಲ್ಲಿ ಹೈದರಾಬಾದ್-ಕರ್ನಾಟಕ ವೃಂದದ ಅಧೀನ ಕಾರ್ಯದರ್ಶಿಗಳಿಗಿಂತಲೂ ಕೆಳಗೆ ತಳ್ಳಲ್ಪಟ್ಟಿದ್ದಾರೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಹೀಗಾಗಿ ಬಾಧಿತ ಅಧಿಕಾರಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿ ಕದ ತಟ್ಟಲು ಮುಂದಾಗಿದ್ದಾರೆ.

ಅಧೀನ ಕಾರ್ಯದರ್ಶಿ ವೃಂದದಲ್ಲಿ ಮಾತ್ರ ಕ್ರೋಢೀಕೃತ ಜೇಷ್ಠತಾಪಟ್ಟಿ ಹೊರಡಿಸುತ್ತಿರುವ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯು ಉಳಿದ ಕೇಡರ್ಗಳಲ್ಲಿ ಕ್ರೋಡೀಕೃತ ಜೇಷ್ಠತಾ ಪಟ್ಟಿ ಹೊರಡಿಸದೇ ಇರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 2022ರ ಸಾಲಿನ ಸರಕಾರದ ಅಧೀನ ಕಾರ್ಯದರ್ಶಿ ವೃಂದದ ಕ್ರೋಡೀಕೃತ ಕರಡು ಜೇಷ್ಠತಾ ಪಟ್ಟಿಯನ್ನು ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸಂವಿಧಾನದ ಅನುಚ್ಛೇಧ 14 ಮತ್ತು 16ಕ್ಕೆ ವಿರುದ್ಧವಾಗಿದೆಯಲ್ಲದೆ, ಇದು ಸಮಾನತೆಯ ಹಕ್ಕಿಗೆ ಚ್ಯುತಿ ತರಲಾಗಿದೆ ಎಂಬ ಬಲವಾದ ಆರೋಪಗಳೂ ಕೇಳಿ ಬಂದಿವೆ. ಈ ಸಂಬಂಧ ಬಾಧಿತ ಅಧಿಕಾರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಪ್ರಧಾನ ಕಾರ್ಯ ದರ್ಶಿಗೆ 2022ರ ಮಾರ್ಚ್ 19ರಂದು ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲವೃಂದದ ಅಧೀನ ಕಾರ್ಯದರ್ಶಿಗಳಾಗಿರುವ ನಿರ್ಮಲಾ ಎಸ್. ಖಟವಾಕರ್, ವೆಂಕಟೇಶಯ್ಯ, ರಾಜಶೇಖರ್ ಕೆ.ಎನ್., ವೀಣಾ ಎ.ಜಿ., ಮಹಾದೇವ ಎಸ್., ಶ್ರೀರಾಮ ಕೆ., ಇಜಾಝ್ ಪಾಷಾ, ಬಶೀರ್ ಅಹ್ಮದ್ ತುರ್ಕಿ, ರಂಗನಾಥ್ ಜಿ., ನಾಗರತ್ನಾ ವಿ. ಪಾಟೀಲ್, ಎನ್.ತಿಪ್ಪೇಸ್ವಾಮಿ, ಕವಿತಾ ಎಲ್., ಮುಹಮ್ಮದ್ ಇಬ್ರಾಹೀಂ, ಆದಿನಾರಾಯಣ, ಅಜಯ್ ಎಸ್. ಕೊರಡೆ, ಸಂಜಯ್ ಬಿ.ಎಸ್. ಮತ್ತು ವೀರಭದ್ರ ಎಂಬವರಿಗೆ ಅನ್ಯಾ ಯವಾಗಿದೆ ಎಂದು ತಿಳಿದು ಬಂದಿದೆ.

 ಹೈದರಾಬಾದ್ ಕರ್ನಾಟಕ ವೃಂದದ ಮಲ್ಲಿಕಾರ್ಜುನ ರಾಮಚಂದ್ರಪ್ಪ, ಚೇತನಾ ಎಂ., ಸೋನಿಕಾ, ಚಂದ್ರಕಲಾ ಎಸ್.ಎನ್., ಬಾಲಪ್ಪ, ಶರಣಪ್ಪ ಎಂಬವರು ಮೂಲವೃಂದದ ಅಧಿಕಾರಿಗಳಿಗಿಂತಲೂ ಕಿರಿಯರಾಗಿದ್ದರೂ ಸರಕಾರದ ಅಧೀನ ಕಾರ್ಯದರ್ಶಿ ವೃಂದದ ಜೇಷ್ಠತೆಯಲ್ಲಿ ಹಿರಿಯರಾಗಲು ಹೇಗೆ ಸಾಧ್ಯ ಎಂದು ಮೂಲವೃಂದದ ಅಧಿಕಾರಿಗಳು ಆಕ್ಷೇಪಣೆಯಲ್ಲಿ ಪ್ರಶ್ನಿಸಿರುವುದು ತಿಳಿದುಬಂದಿದೆ.

 ‘ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ಆಡಳಿತ ಕೋಶ) ಶಾಖೆಯು ಸಚಿವಾಲಯದ ವಿವಿಧ ವೃಂದಗಳ ಜೇಷ್ಠತೆ ಪಟ್ಟಿಗಳನ್ನು ಪ್ರತಿವರ್ಷ ಹೊರಡಿಸುತ್ತದೆ. ಆದರೆ ಸಚಿವಾಲಯದಲ್ಲಿ ಕಿರಿಯ ಸಹಾಯಕ ವೃಂದದಿಂದ ಅಧೀನ ಕಾರ್ಯದರ್ಶಿ ವೃಂದದವರೆಗೆ ಮುಂಭಡ್ತಿಯಲ್ಲಿ ಹೈದರಾಬಾದ್ ಕರ್ನಾಟಕ ಮೀಸಲಾತಿ ನೀಡಲಾಗಿದೆ. ಕೇವಲ ಅಧೀನ ಕಾರ್ಯದರ್ಶಿ ವೃಂದದಲ್ಲಿ ಮಾತ್ರ ಕ್ರೋಡೀಕೃತ ಜೇಷ್ಠತಾ ಪಟ್ಟಿಯನ್ನು ಹೊರಡಿಸುತ್ತಿರುವ ಇಲಾಖೆಯು ಉಳಿದ ಕೇಡರ್‌ಗಳಲ್ಲಿ ಕ್ರೋಡೀಕೃತ ಜೇಷ್ಠತೆ ಪಟ್ಟಿಯನ್ನೇಕೆ ಹೊರಡಿಸುತ್ತಿಲ್ಲ’ ಎಂದು ಮೂಲವೃಂದ ಅಧಿಕಾರಿ ಗಳು ಪ್ರಶ್ನಿಸಿದ್ದಾರೆ.

 ಅಧೀನ ಕಾರ್ಯದರ್ಶಿ ಮೂಲವೃಂದ ಮತ್ತು ಹೈ-ಕ ವೃಂದಕ್ಕೆ ಭಡ್ತಿ ನೀಡಲು 2021ರ ಸಾಲಿನಲ್ಲಿ ಪ್ರತ್ಯೇಕ ಮುಂಭಡ್ತಿ ಸಭೆ ನಡೆಸಲಾಗಿದೆ. ಸಚಿವಾ ಲಯದಲ್ಲಿ ಖಾಲಿ ಇದ್ದ ಅಧೀನ ಕಾರ್ಯದರ್ಶಿ ಮೂಲ ವೃಂದ ಮತ್ತು ಸ್ಥಳೀಯ ವೃಂದಕ್ಕೆ ಒಟ್ಟಿಗೆ ಮುಂಭಡ್ತಿ ಸಭೆ ನಡೆಸದೇ ಸ್ಥಳೀಯ ವೃಂದಕ್ಕೆ ಮಾತ್ರ ಭಡ್ತಿ ನೀಡುವ ಉದ್ದೇಶದಿಂದಲೇ ಸಭೆ ನಡೆಸಲಾಗಿದೆ. ಅದರಂತೆ ಮೂಲವೃಂದದವರಿಗಿಂತಲೂ ಮುಂಚೆ 2021ರ ಜೂನ್ 25ರಂದು ಭಡ್ತಿ ನೀಡಲಾಗಿದೆ. ಇದರಿಂದಾಗಿ ಮೂಲವೃಂದದವರಿಗಿಂತಲೂ ಕಿರಿಯರಾದ ಹೈ-ಕ ವೃಂದದ ಅಧಿಕಾರಿಗಳು ಜೇಷ್ಠತೆ ಪಟ್ಟಿಯಲ್ಲಿ ಹಿರಿಯರಾಗಿದ್ದಾರೆ ಎಂದು ಎಂದು ತಿಳಿದು ಬಂದಿದೆ.

* ಸಮಾನತೆಯ ಹಕ್ಕಿಗೆ ಚ್ಯುತಿ: ಸಚಿವಾಲಯದಲ್ಲಿ ಖಾಲಿ ಇದ್ದ ಅಧೀನ ಕಾರ್ಯದರ್ಶಿ ಹುದ್ದೆಗಳಿಗೆ ಮೂಲ ಮತ್ತು ಸ್ಥಳೀಯ ವೃಂದದ ಶಾಖಾಧಿಕಾರಿಳಿಗೆ ಒಟ್ಟಿಗೇ ಭಡ್ತಿ ನೀಡಿದ್ದಲ್ಲಿ ಸೇವೆಯಲ್ಲಿ ಹಿರಿಯರಾಗಿರುವ ಮೂಲವೃಂದದವರಿಗೆ ಜೇಷ್ಠತೆಯಲ್ಲಿ ಅನ್ಯಾಯ ವಾಗುತ್ತಿರಲಿಲ್ಲ. ಇದರ ಬದಲಿಗೆ ಸೇವೆಯಲ್ಲಿ ಕಿರಿಯರಾದ ಹೈ-ಕ ವೃಂದದ ಶಾಖಾಧಿಕಾರಿಗಳಿಗೆ ಮುಂಚಿತವಾಗಿಯೇ ಭಡ್ತಿ ನೀಡಿ ಅನ್ಯಾಯ ಎಸಗಲಾಗಿದೆ. ಇದು ಸಂವಿಧಾನದ 14 ಮತ್ತು 16ರಡಿ ಸಮಾನತೆಯ ಹಕ್ಕಿಗೆ ಚ್ಯುತಿ ತಂದಂತಾಗಿದೆ.

ಇನ್ನು, ಸಚಿವಾಲಯದಲ್ಲಿ ಖಾಲಿ ಇದ್ದ ಮೂಲವೃಂದದ ಅಧೀನ ಕಾರ್ಯದರ್ಶಿ ಹುದ್ದೆಗಳಿಗೆ ಭಡ್ತಿ ನೀಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಕಾರ್ಯದರ್ಶಿಗೆ 2021ರ ಮಾರ್ಚ್ 31ರಂದೇ ಮನವಿ ಸಲ್ಲಿಸಲಾಗಿತ್ತು. ಆದರೆ ಮುಂಭಡ್ತಿ ಪ್ರಕ್ರಿಯೆಯನ್ನು ಪ್ರಾರಂಭಿಸದೇ ವಿಳಂಬ ಮಾಡಲಾಗಿತ್ತು. ಜೇಷ್ಠತೆಯಲ್ಲಿ ಅನ್ಯಾಯವಾಗಲು ಇದು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ.

 ಶಾಖಾಧಿಕಾರಿ ಮೂಲ ವೃಂದದ ಅಧಿಕಾರಿಗಳಿಗೆ 5 ವರ್ಷ ಸೇವಾವಧಿ ಪೂರ್ಣಗೊಂಡಿದ್ದರೆ ಹೈ-ಕ ವೃಂದಲ್ಲಿ 3 ವರ್ಷಗಳ ಸೇವಾವಧಿ ಮಾತ್ರ ಪೂರ್ಣಗೊಂಡಿದೆ. ಆದರೂ ಹೈ-ಕ ವೃಂದದ ಶಾಖಾಧಿಕಾರಿಗಳಿಗೆ ಅಧೀನ ಕಾರ್ಯದರ್ಶಿ ವೃಂದಕ್ಕೆ ಭಡ್ತಿ ನೀಡುವಾಗ ಶಾಖಾಧಿಕಾರಿ ವೃಂದದಲ್ಲಿ ಸಲ್ಲಿಸಿದ್ದ ಸೇವಾವಧಿ 3 ವರ್ಷವಾಗಿತ್ತು. 5 ವರ್ಷಗಳ ಸೇವಾವಧಿ ಪೂರ್ಣಗೊಂಡಿದ್ದವರಿಗೆ ಮುಂಭಡ್ತಿ ನೀಡಲು ಡಿಪಿಸಿ ಸಭೆಯನ್ನು ವಿಳಂಬವಾಗಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ‘The File’ಗೆ ಖಚಿತಪಡಿಸಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X