Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇಕೆದಾಟು ಅನುಷ್ಠಾನಕ್ಕೆ ಸರ್ಕಾರದಿಂದ...

ಮೇಕೆದಾಟು ಅನುಷ್ಠಾನಕ್ಕೆ ಸರ್ಕಾರದಿಂದ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 March 2022 11:09 AM IST
share
ಮೇಕೆದಾಟು ಅನುಷ್ಠಾನಕ್ಕೆ ಸರ್ಕಾರದಿಂದ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 

ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ.  ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದ್ದಾರೆ, ಅದರ ತಮಿಳುನಾಡು ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಪ್ರಕಾರವೂ ಇಲ್ಲ. ರಾಜಕೀಯ ತಂತ್ರವಷ್ಟೇ ಎಂದರು. ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿವೆ. ಅದಕ್ಕೆ ಬೆಲೆ ಇಲ್ಲ ಎಂದರು.

ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ  ತೆಗೆದುಗೊಳ್ಳಲಿದೆ ಎಂದರು. 

ಶಿವಸೇನೆ ನಾಯಕ ಸಂಜಯ ರಾವತ್ ಅವರು ಬೆಳಗಾವಿ ಫೈಲ್ಸ್ ಬರಬೇಕು ಅಲ್ಲಿಯೂ ಅನೇಕ ಘಟನೆಗಳು ನಡೆದಿವೆ ಎಂದು ಆರೋಪಿಸಿರುವ ಬಗ್ಗೆ  ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ವಿಷಯದ ಬಗ್ಗೆ  ಈಗಾಗಲೇ ತೀರ್ಪು ನೀಡಲಾಗಿದೆ. 1956 ನಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ.  ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X