ಬೇಲೂರು: ಕೆಎಸ್ಸಾರ್ಟಸಿ ಬಸ್- ಕಾರು ಮಧ್ಯೆ ಢಿಕ್ಕಿ; ಐವರು ವಿದ್ಯಾರ್ಥಿಗಳು ಮೃತ್ಯು

ಹಾಸನ: ಬೇಲೂರು ತಾಲೂಕಿನ ಕಲ್ಕೆರೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಕೆಎಸ್ಸಾರ್ಟಸಿ ಬಸ್ ಮತ್ತು ಕಾರೊಂದರ ನಡುವೆ ಹಾಸನ- ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಇನ್ನೋರ್ವ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ.
ಮೃತರನ್ನು ಬೇಲೂರಿನ ಮುಹಮ್ಮದ್ ಹಸನ್ (20 ಅಕ್ಮಲ್ (19) ಮುಹಮ್ಮದ್ ಕೈಫ್ (20) ರಿಹಾನ್ (18) ಜಿಲಾನಿ (19) ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಶವಾಗಾರದ ಕೊಠಡಿಯಲ್ಲಿ ಇರಿಸಲಾಗಿದೆ.
ಈ ಸಂಬಂಧ ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Next Story





