Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈ ಬಾರಿ ಬೇಸಗೆಯಲ್ಲಿ ಕುಡಿಯುವ ನೀರಿನ...

ಈ ಬಾರಿ ಬೇಸಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದು : ಮೇಯರ್ ಪ್ರೇಮಾನಂದ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ22 March 2022 4:09 PM IST
share
ಈ ಬಾರಿ ಬೇಸಗೆಯಲ್ಲಿ  ಕುಡಿಯುವ ನೀರಿನ ಕೊರತೆಯಾಗದು : ಮೇಯರ್ ಪ್ರೇಮಾನಂದ ಶೆಟ್ಟಿ

ಮಂಗಳೂರು, (ತುಂಬೆ): ಈ ಬಾರಿ ಬೇಸಗೆಯಲ್ಲಿ  ಕುಡಿಯುವ ನೀರಿನ ಕೊರತೆಯಾಗದು ಎಂದು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿರುವ ನೇತ್ರಾವತಿ ನದಿಗೆ ಅವರು ಇಂದು ಗಂಗಾ ಪೂಜೆಯೊಂದಿಗೆ ಬಾಗಿನವನ್ನು ಅರ್ಪಿಸಿ ಮಾತನಾಡುತ್ತಿದ್ದರು.

ಮುಂದಿನ ಎರಡು ತಿಂಗಳುಗಳ ಕಾಲ ಕುಡಿಯುವ ನೀರಿನ  ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ನೀರು ವಿತರಣೆ ಸವಾಲು ಮನಪಾದ ಮುಂದೆ ಇದ್ದು ನಿಗಾ ಇಡಲಾಗುತ್ತದೆ ಎಂದು ಮ.ನ.ಪಾ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಹೇಳಿದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಮಾಹಮಾರಿಯಿಂದ ಇಡೀ ಜಿಲ್ಲೆ ಸ್ತಬ್ದವಾಗಿದ್ದ ಹಿನ್ನೆಲೆಯಲ್ಲಿ ಬೇಸಿಗೆ ಕಾಲದಲ್ಲಿ ಮಂಗಳೂರು ಮ.ನ.ಪಾಗೆ ಕುಡಿಯುವ ನೀರಿನ ಸಮಸ್ಯೆ ಆಗಿಲ್ಲ, ಆದರೆ ಈ ಬಾರಿ ಬೇಸಿಗೆ ಕಾಲದಲ್ಲಿ ಎಪ್ರಿಲ್ ಮೇ ನಲ್ಲಿ ನೀರಿನ  ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ, ಹಾಗಾಗಿ ನೀರಿನ ಅಭಾವ ವಾಗುವ ಸಾಧ್ಯತೆ ಗಳಿವೆ ಆದರೆ ಈಗಾಗಲೇ ಅದಕ್ಕೆ ಪೂರ್ವಯೋಜಿತವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಎರಡರಿಂದ ಮೂರು ತಿಂಗಳುಕಾಲ ನೀರಿನ ಶೇಖರಣೆ ಇದೆ ಆದರೂ ಮುಂಜಾಗೃತ ಕ್ರಮವಾಗಿ ನೀರಿನ ಅಧ್ಯತೆಯ ಮೇಲೆ ಮಿತವಾಗಿ ನೀರಿನ ಬಳಕೆ ಮಾಡಿ, ಕುಡಿಯುವ ನೀರಿನ ಹೊರತು ಇತರ ಖರ್ಚಿಗಾಗಿ ಬೇರೆ ಮೂಲಗಳನ್ನು ಅವಲಂಬಿಸಿ ಎಂದು ಅವರು ಮನವಿ ಮಾಡಿದರು.

ಅಮೃತ್ ಯೋಜನೆ ಯ ಒಂದು ಹಂತದ ಕಾಮಗಾರಿ  ಮೂರು ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ, 10 ಎಮ್.ಎಲ್.ಡಿ ಯಿಂದ 20 ಎಂ.ಎಲ್ ಡಿ ಗೆ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಇದು ಪೂರ್ತಿಯಾದ ಬಳಿಕ 10 ಎಂ.ಎಲ್.ಡಿ ಹೆಚ್ಚುವರಿ ನೀರು ನಗರ ಭಾಗಕ್ಕೆ ಸಿಗುತ್ತದೆ. 800 ಕೋಟಿ ವೆಚ್ಚದಲ್ಲಿ ಜಲಸಿರಿಯೋಜನೆ ಯಡಿಯಲ್ಲಿ ವಿವಿಧ ಕಾಮಗಾರಿಗಳು ವೇಗ ಪಡೆದುಕೊಂಡಿದೆ. ಈ ಎಲ್ಲಾ ಕಾಮಗಾರಿಗಳು ಪೂರ್ತಿಯಾದರೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತದೆ.  ತುಂಬೆ ಅಣೆಕಟ್ಟಿನಿಂದ ವರ್ಷಪೂರ್ತಿ ಕುಡಿಯುವ ನೀರು ಸರಬರಾಜು ಆಗುತ್ತದೆ ಎಂದು ವಿವರಿಸಿದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಜಗತ್ತಿನ ಎಲ್ಲಾ ಕಡೆಗಳಲ್ಲಿ ಪಕೃತಿಯ ಅದ್ಬುತ ಕೊಡುಗೆಗಾಗಿ ಪೂಜೆ ಮಾಡಲಾಗುತ್ತಿದೆ. ಜಲಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲೂ ಪೂಜೆ ನಡೆಯಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿ ಮನೆಯಲ್ಲೂ ನೀರು ಇಂಗಿಸುವ ಕಾರ್ಯ ನಡೆಯಬೇಕು ಅ ಮೂಲಕ ಜಲಸಮೃದ್ಧಿಗಾಗಿ ಕಾರ್ಯ ಪವೃತ್ತರಾಗಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪಮೇಯರ್ ಸುಮಂಗಳ ರಾವ್, ಕಾರ್ಪೋರೆಟ್ ಗಳಾದ ದಿವಾಕರ ಪಾಂಡೇಶ್ವರ ಶಶಿಧರ ಹೆಗ್ಡೆ, ಭಾಸ್ಕರ ಕೆ, ಲೀಲಾವತಿ ಪ್ರಕಾಶ್,  ಗಣೇಶ್ ಕುಲಾಲ್, ಮನೋಹರ್ ಕದ್ರಿ, ಕಿರಣ್ ಕೋಡಿಕಲ್,  ಸುದೀರ್ ಶೆಟ್ಟಿ ಕಣ್ಣೂರು, ಶೋಭಾರಾಜೇಶ್, ಲೋಕೇಶ್,  ಮನೋಜ್,ಕಿಶೋರ್ ಕೊಟ್ಟಾರಿ, ರಂಜಿನಿ ಕೋಟ್ಯಾನ್, ಶಕೀಲಾ ಕಾವ, ರೂಪ ಶ್ರೀ , ಜಯಶ್ರೀ ಕುಡ್ವ, ಸಂದೀಪ್ ಗರೋಡಿ,ವೀಣಾ ಮಂಗಳ , ಜಗದೀಶ್ ಶೆಟ್ಟಿ ಬೊಳಾರ, ತುಂಬೆ ಗ್ರಾ.ಪಂ. ಅಧ್ಯಕ್ಷ ಪ್ರವೀಣ್, ಮಂಗಳೂರು ಮ.ನಪಾ.ಆಯುಕ್ತ ಅಕ್ಷಯ ಶ್ರೀದರ್, ಮ.ನ.ಪಾ ಎ.ಡಬ್ಲೂ  ಚೇತನ್, ಎ.ಇ.ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X