Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ: ʼದಿ ಕಾಶ್ಮೀರ ಫೈಲ್ಸ್ʼ...

ರಾಜಸ್ಥಾನ: ʼದಿ ಕಾಶ್ಮೀರ ಫೈಲ್ಸ್ʼ ಸಿನಿಮಾ ಪ್ರದರ್ಶನದ ಹಿನ್ನೆಲೆ; ಕೋಟಾದಲ್ಲಿ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

ಧಾರ್ಮಿಕ ಹಬ್ಬಗಳ ದೃಷ್ಟಿಯಿಂದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ

ವಾರ್ತಾಭಾರತಿವಾರ್ತಾಭಾರತಿ22 March 2022 6:25 PM IST
share
ರಾಜಸ್ಥಾನ: ʼದಿ ಕಾಶ್ಮೀರ ಫೈಲ್ಸ್ʼ ಸಿನಿಮಾ ಪ್ರದರ್ಶನದ ಹಿನ್ನೆಲೆ; ಕೋಟಾದಲ್ಲಿ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

ಕೋಟಾ: ರಾಜಸ್ಥಾನದ ಕೋಟಾ ಜಿಲ್ಲಾಡಳಿತವು ಮುಂಬರುವ ಧಾರ್ಮಿಕ ಹಬ್ಬಗಳ ದೃಷ್ಟಿಯಿಂದ ಇತ್ತೀಚೆಗೆ ಬಿಡುಗಡೆಯಾಗಿರುವ ʼದಿ ಕಾಶ್ಮೀರ ಫೈಲ್ಸ್ʼ ಚಲನಚಿತ್ರದ ಪ್ರದರ್ಶನದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮಂಗಳವಾರದಿಂದ ಒಂದು ತಿಂಗಳ ಅವಧಿಯ ನಿಷೇಧಾಜ್ಞೆ ವಿಧಿಸಿದೆ.

ಸೆಕ್ಷನ್ 144 ಮಂಗಳವಾರ ಬೆಳಿಗ್ಗೆ 6 ರಿಂದ ಜಾರಿಗೆ ಬಂದಿದ್ದು, ಏಪ್ರಿಲ್ 21 ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ ಎಂದು ವರದಿಯಾಗಿದೆ.

ಈ ಅವಧಿಯಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಒಂದು ಸ್ಥಳದಲ್ಲಿ ಸೇರುವಂತಿಲ್ಲ. ಶಾಂತಿ ಭಂಗ ತರುವಂತಹ ಯಾವುದೇ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಸ್ಥಳೀಯ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ. ಕೋಮು ದ್ವೇಷಕ್ಕೆ ಕಾರಣವಾಗಬಹುದಾದ ಆಕ್ಷೇಪಾರ್ಹ ಅಥವಾ ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗಬೇಡಿ ಎಂದು ನಾಗರಿಕರಿಗೆ ಸೂಚಿಸಲಾಗಿದೆ ಎಂದು thenewindianexpress.com ವರದಿ ಮಾಡಿದೆ. 

ಚೇತಿ ಚಂದ್, ಶ್ರೀ ಮಹಾವೀರ್ ಜಯಂತಿ, ಗುಡ್‌ ಫ್ರೈಡೆ, ಬೈಸಾಖಿ ಮತ್ತು ಜುಮುಅತುಲ್ ವಿದಾ ಮೊದಲಾದ ಹಬ್ಬಗಳು ಸನ್ನಿಹಿತವಾಗಿರುವುದರಿಂದ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಕೋಟಾದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕೋಟಾ ಪೊಲೀಸ್ ವರಿಷ್ಠಾಧಿಕಾರಿಯ ಪತ್ರವನ್ನು ಉಲ್ಲೇಖಿಸಿ ಹಂಗಾಮಿ ಜಿಲ್ಲಾಧಿಕಾರಿಗಳು ಮಾರ್ಚ್ 21 ರಂದು ಆದೇಶ ಹೊರಡಿಸಿದ್ದಾರೆ. 

ಚಿತ್ರಮಂದಿರಗಳಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ಪ್ರದರ್ಶನ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜನಸಂದಣಿ, ಪ್ರತಿಭಟನೆಗಳು, ಸಭೆಗಳು ಮತ್ತು ಮೆರವಣಿಗೆಗಳನ್ನು ಸ್ಥಗಿತಗೊಳಿಸುವ ಅವಶ್ಯಕತೆಯಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋಟಾ ಜಿಲ್ಲಾಧಿಕಾರಿ ಹರಿಮೋಹನ್ ಮೀನಾ ರಜೆಯಲ್ಲಿರುವ ಕಾರಣ ಹಂಗಾಮಿ ಜಿಲ್ಲಾಧಿಕಾರಿಯಾಗಿರುವ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ರಾಜ್ ಕುಮಾರ್ ಸಿಂಗ್ ಅವರು ಈ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X