ಮಾ.23ರಂದು ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ
ಉಡುಪಿ : ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್ ಇವರ ಸಹಯೋಗದಲ್ಲಿ ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಮಾ.23ರಂದು ಬೆಳಗ್ಗೆ 9.30ಕ್ಕೆ ಮಣಿಪಾಲದ ಎಂಐಸಿ ಆಡಿಟೋರಿಯಂನಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಉದ್ಘಾಟಿಸಲಿದ್ದು, ಮಣಿಪಾಲ ಎಂಐಸಿಯ ನಿರ್ದೇಶಕಿ ಡಾ.ಪದ್ಮಾ ರಾಣಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story