ಮಾ.24ರಂದು ವಿಶ್ವ ಕ್ಷಯರೋಗ ದಿನಾಚರಣೆ
ಉಡುಪಿ : ಜಿಲ್ಲಾಡಳಿತ, ಜಿಪಂ, ನಗರಸಭೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಮಾ.24ರಂದು ಸಂಜೆ 4 ಗಂಟೆಗೆ ಮಲ್ಪೆ ಬೀಚ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮರಳು ಶಿಲ್ಷ ಕಲಾಕೃತಿ, ಗಾಳಿಪಟ ಪ್ರದರ್ಶನ, ಯಕ್ಷಗಾನ ಹಾಗೂ ಬೀದಿ ನಾಟಕದ ಮೂಲಕ ಕ್ಷಯ ರೋಗದ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Next Story





