Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾರ್ವತ್ರಿಕ ಮುಷ್ಕರ ಯಶಸ್ವಿಗೆ ಬೀಡಿ...

ಸಾರ್ವತ್ರಿಕ ಮುಷ್ಕರ ಯಶಸ್ವಿಗೆ ಬೀಡಿ ಕಾರ್ಮಿಕರ ಮಹಾಸಭೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ22 March 2022 10:06 PM IST
share

ಮಂಗಳೂರು : ನಮ್ಮನ್ನಾಳುತ್ತಿರುವ ಸರಕಾರಗಳು ಕಾಯ್ದೆ-ಕಾನೂನುಗಳನ್ನು ತಿದ್ದುಪಡಿ ಮಾಡಿ ಜನ ಸಾಮಾನ್ಯರನ್ನು ಶೋಷಿಸುತ್ತಿವೆ. ಸ್ವಾತಂತ್ರ್ಯಾನಂತರ ಭಾರತೀಯರ ತೆರಿಗೆ ಹಣದಿಂದ ಸ್ಥಾಪಿಸಲ್ಪಟ್ಟು ದೇಶದ ಆರ್ಥಿಕತೆಗೆ, ಅಭಿವೃದ್ಧಿಗೆ ತನ್ನದೇ ಆದ ಮಹತ್ತರ ಕೊಡುಗೆಗಳನ್ನು ನೀಡುತ್ತಿರುವ ಸರಕಾರಿ ಸ್ವಾಮ್ಯದ ಸಾರ್ವಜನಿಕ ಆಸ್ತಿ ಉದ್ದಿಮೆಗಳನ್ನು ಮುಚ್ಚಲಾಗುತ್ತಿದೆ ಮತ್ತು ಖಾಸಗೀಕರಿಸಲಾಗುತ್ತಿದೆ. ಕಾರ್ಮಿಕ ಕಾನೂನುಗಳನ್ನು ಮಾಲಕರ ಪರವಾಗಿ ಬದಲಾಯಿಸಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚುತ್ತಿರುವುದರಿಂದ ಇತರ ಎಲ್ಲಾ ಉತ್ಪನ್ನ, ಸೇವೆಗಳ ಬೆಲೆ ನಿಯಂತ್ರಣವಿಲ್ಲದೆ ಏರುತ್ತಿದೆ. ಕೋಮು ಭಾವನೆಯನ್ನು ಕೆರಳಿಸಿ ಜನಸಾಮಾನ್ಯರ ನಿಜವಾದ ಸಮಸ್ಯೆಗಳನ್ನು ಮರೆಮಾಚಲಾಗುತ್ತಿದೆ. ಕನಿಷ್ಠ ಮಜೂರಿಯಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರಿಗೆ ಪಾವತಿಸಬೇಕಾದ ತುಟ್ಟಿಭತ್ತೆ ಮತ್ತು ಕನಿಷ್ಠಕೂಲಿಯನ್ನು ಸರಿಯಾಗಿ ನೀಡದೆ ಸತಾಯಿಸಲಾಗುತ್ತಿದೆ. ಸರಕಾರದ ಇಂತಹ ನೀತಿಗಳನ್ನು ವಿರೋಧಿಸಿ ʼಭಾರತ ಉಳಿಸಿ - ಜನತೆಯನ್ನು ರಕ್ಷಿಸಿ’ ಎಂಬ ಘೋಷಣೆಯೊಂದಿಗೆ ಮಾ.೨೮/೨೯ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಬೀಡಿ ಕಾರ್ಮಿಕರ ಮಹಾಸಭೆ ತೀರ್ಮಾನಿಸಿದೆ.

ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಸಿಬಿಇಎ ಸಭಾಂಗಣದ ಎಸ್.ಚಂದಪ್ಪ ಅಂಚನ್ ಸಭಾಂಗಣ ಹಾಗೂ ಎಂ. ಶಿವಪ್ಪ ಕೋಟ್ಯಾನ್ ವೇದಿಕೆಯಲ್ಲಿ ಮಂಗಳವಾರ ನಡೆದ ಎಐಟಿಯುಸಿ ನೇತೃತ್ವದ ಬೀಡಿ ಆ್ಯಂಡ್ ಟೊಬೆಕ್ಕೊ ಲೇಬರ್ ಯೂನಿಯನ್‌ನ ೮೬ ನೇ ವಾರ್ಷಿಕ ಮಹಾಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಯಿತು.

ಮಾ.೨೮ರಂದು ತಾಲೂಕು ಕೇಂದ್ರಗಳಲ್ಲಿ ನಡೆಯುವ ಮುಷ್ಕರದಲ್ಲಿ ಭಾಗವಹಿಸುವುದಲ್ಲದೆ ಮಾ.೨೯ರಂದು ಬೆಳಗ್ಗೆ ೧೦ಕ್ಕೆ ನಗರದ ಜ್ಯೋತಿ ಟಾಕೀಸ್ ಬಳಿಯಿಂದ ಹೊರಡುವ ರ್ಯಾಲಿ ಹಾಗೂ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ  ನಡೆಯುವ ಪ್ರತಿಭಟನಾ ಪ್ರದರ್ಶನದಲ್ಲೂ ಭಾಗವಹಿಸಲು ಮಹಾಸಭೆ ತೀರ್ಮಾನಿಸಿದೆ.

ಯೂನಿಯನ್‌ನ ಅಧ್ಯಕ್ಷೆ ಸುಲೋಚನಾ ಹರೀಶ್ ಕವತ್ತಾರು ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು.  ಯೂನಿಯನ್ ಕಾರ್ಯದರ್ಶಿ ವಿ.ಎಸ್. ಬೇರಿಂಜ, ಬ್ಯಾಂಕ್ ನೌಕರರ ಸಂಘಟನೆಯ ಮುಖ್ಯಸ್ಥರಾದ ವಿನ್ಸೆಂಟ್ ಡಿಸೋಜ, ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ವಿ. ರಾವ್, ಬೀಡಿ ನೌಕರರ ಸಂಘಟನೆಯ ತಿಮ್ಮಪ್ಪ ಕಾವೂರು, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ. ಶೇಖರ್, ಜೊತೆ ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್, ಯೂನಿಯನ್‌ನ ಕೋಶಾಧಿಕಾರಿ ಕರುಣಾಕರ್ ಮಾರಿಪಲ್ಲ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X