ನೇಮಕಾತಿ ನಿರೀಕ್ಷೆಯಲ್ಲಿದ್ದ ಕೆಎಎಸ್ ಅಧಿಕಾರಿಗಳಿಗೆ ಪೌರಾಡಳಿತ ಇಲಾಖೆಯಿಂದ ಮೊದಲ ನೇಮಕಾತಿ ಆದೇಶ

ಬೆಂಗಳೂರು, ಮಾ.22: ನೇಮಕಾತಿ ನಿರೀಕ್ಷೆಯಲ್ಲಿದ್ದ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳಿಗೆ ಪೌರಾಡಳಿತ ಇಲಾಖೆ ಮೊಟ್ಟಮೊದಲಿಗೆ ನೇಮಕಾತಿ ಆದೇಶ ನೀಡಿದ್ದು, ಇದರಿಂದ ನೇಮಕಾತಿಗಾಗಿ ಸತತ 11 ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದ ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.
2011ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ ವಿಧೇಯಕಕ್ಕೆ ರಾಜ್ಯ ವಿಧಾನ ಮಂಡಳ ಅನುಮೋದನೆ ನೀಡಿದ ನಂತರ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು, ಎಲ್ಲಾ ಇಲಾಖೆಗಳಿಗಿಂತ ಮೊದಲು ತಮ್ಮ ಪೌರಾಡಳಿತ ಇಲಾಖೆಯಿಂದ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಕೆಎಎಂಎಸ್ ಮುಖ್ಯಾಧಿಕಾರಿ ಶ್ರೇಣಿ-1 ಗ್ರೂಪ್-ಬಿ ಹುದ್ದೆಗಳಿಗೆ ಆಯ್ಕೆಯಾಗಿದ್ದ 13 ಅಧಿಕಾರಿಗಳು ಎಲ್ಲ ಇಲಾಖೆಗಳಿಗಿಂತ ಪೌರಾಡಳಿತ ಇಲಾಖೆ ಮೊದಲು ನೇಮಕಾತಿ ಆದೇಶವನ್ನು ತಮಗೆ ನೀಡಿದ್ದಕ್ಕಾಗಿ ಸಚಿವ ಎಂಟಿಬಿ ನಾಗರಾಜು ಅವರನ್ನು ಮಂಗಳವಾರ ವಿಧಾನಸೌಧದಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
Next Story





