ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

ಡೆಹ್ರಾಡೂನ್: ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಡೆಹ್ರಾಡೂನ್‌ನ ಪರೇಡ್ ಮೈದಾನದಲ್ಲಿ ಎರಡನೇ ಅವಧಿಗೆ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಧಾಮಿ ಪ್ರಮಾಣ ವಚನ ಸ್ವೀಕರಿಸಿದರು.
ಆದಿತ್ಯನಾಥ್, ಮನೋಹರ್ ಲಾಲ್ ಖಟ್ಟರ್, ಪ್ರಮೋದ್ ಸಾವಂತ್ ಹಾಗೂ ಮೀನಾಕ್ಷಿ ಲೇಖಿ ಸೇರಿದಂತೆ ಇತರ ಬಿಜೆಪಿ ನಾಯಕರು ಈ ಭವ್ಯ ಸಮಾರಂಭದಲ್ಲಿ ಉಪಸ್ಥಿತರಿದ್ದರು.
46 ವರ್ಷದ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಉತ್ತರಾಖಂಡ ಗವರ್ನರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಗುರ್ಮಿತ್ ಸಿಂಗ್ ಪ್ರಮಾಣ ವಚನ ಬೋಧಿಸಿದರು.
Next Story





