ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾ.ಕೆ.ಎನ್.ಫಣೀಂದ್ರ ನೇಮಕ

ಕೆ.ಎನ್. ಫಣೀಂದ್ರ
ಬೆಂಗಳೂರು, ಮಾ.23: ಎರಡು ವರ್ಷಗಳಿಂದ ಖಾಲಿ ಇದ್ದ ಕರ್ನಾಟಕ ಉಪ ಲೋಕಾಯುಕ್ತರ ಹುದ್ದೆಗೆ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಆನಂದ ಅವರ ಸೇವಾವಧಿ 2020ರ ಡಿಸೆಂಬರ್ನಲ್ಲಿ ಅಂತ್ಯವಾಗಿತ್ತು. ಇದೀಗ ಈ ಹುದ್ದೆಗೆ ನಿವೃತ್ತ ನ್ಯಾ.ಕೆ.ಎನ್.ಫಣೀಂದ್ರ ಅವರನ್ನು ನೇಮಿಸಲಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಕೆಲವು ಐತಿಹಾಸಿಕ ತೀರ್ಪುಗಳನ್ನು ನೀಡಿದ ಕೀರ್ತಿ ಕೆ.ಎನ್.ಫಣೀಂದ್ರ ಅವರಿಗೆ ಸಲ್ಲುತ್ತದೆ.
ನ್ಯಾ.ಕೆ.ಎನ್.ಫಣೀಂದ್ರ ಅವರು ತುಮಕೂರಿನಲ್ಲಿ ಮೊದಲಿಗೆ ವಕೀಲರಾಗಿ, ಬಳಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ, ಹೈಕೋರ್ಟ್ ಸಿಜೆಗೆ ಕಾರ್ಯದರ್ಶಿಯಾಗಿ ಹಾಗೂ ಹೈಕೋರ್ಟ್ ನ್ಯಾಯಾಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.
Next Story





