Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಡಿಸಿ ಮನ್ನಾ ಭೂಮಿ...

ಉಡುಪಿ ಜಿಲ್ಲೆಯ ಡಿಸಿ ಮನ್ನಾ ಭೂಮಿ ಅತಿಕ್ರಮಣ ಶೀಘ್ರ ತೆರವು: ಡಿಸಿ ಕೂರ್ಮಾ ರಾವ್

ಎಸ್‌ಸಿ-ಎಸ್‌ಟಿ ಹಿತರಕ್ಷಣಾ, ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ23 March 2022 4:18 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ ಜಿಲ್ಲೆಯ ಡಿಸಿ ಮನ್ನಾ ಭೂಮಿ ಅತಿಕ್ರಮಣ ಶೀಘ್ರ ತೆರವು: ಡಿಸಿ ಕೂರ್ಮಾ ರಾವ್

ಉಡುಪಿ : ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಭೂಮಿಯನ್ನು ಉಳ್ಳವರೇ ಅತಿಕ್ರಮಣ ಮಾಡಿ ಬಳಕೆ ಮಾಡುತ್ತಿರುವ ಬಗ್ಗೆ ಹೆಚ್ಚೆಚ್ಚು ದೂರುಗಳು ಕೇಳಿ ಬರುತ್ತಿದ್ದು, ಇವುಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಸಿ ಶೀಘ್ರವೇ ಅತಿಕ್ರಮಣ ತೆರವುಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು  ಹೇಳಿದ್ದಾರೆ.

ಸುಮಾರು ಎರಡು ವರ್ಷಗಳ ಬಳಿಕ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ  ಜಿ.ಪಂ. ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಒಂದು ವೇಳೆ ಅರಣ್ಯ ಇಲಾಖೆಯವರು ಈ ಭೂಮಿ ಯನ್ನು ಅತಿಕ್ರಮಣ ಮಾಡಿದ್ದಲ್ಲಿ ಅವರಿಂದ ವಾಪಸ್ ಪಡೆಯಲು ಕ್ರಮಕೈಗೊಳ್ಳಲಾಗುವುದು ಎಂದವರು ಭರವಸೆ ನೀಡಿದರು.

ಸರಕಾರ ಪಪಿಶಿಷ್ಟ ಜಾತಿ ಹಾಗೂ ಪಂಗಡದವರ ಹಿತರಕ್ಷಣೆಗಾಗಿ ಹಲವು ವಿಶೇಷ ಕಾನೂನುಗಳನ್ನು ಜಾರಿಗೆ ತಂದಿದೆ. ಅವುಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ರೀತಿಯ ನೆರವು ಹಾಗೂ ಪರಿಹಾರಗಳನ್ನು  ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸರಕಾರ ಪ.ಜಾತಿ ಹಾಗೂ ಪಂಗಡದವರ ಕಲ್ಯಾಣಾಭಿವೃದ್ಧಿ ಸೇರಿದಂತೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿರಿಸಿದೆ. ಅವನ್ನು ಈ ಸಮುದಾಯಗಳ ಒಳಿತಿಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಕಾನೂನುನ್ನು ಸಹಾ ಜಾರಿಗೆ ತಂದಿದ್ದು, ಇದರ ಪಾಲನೆಯಾಗಬೇಕು ಎಂದರು.

ವಿವಿಧ ಯೋಜನೆಯಡಿ ಸರಕಾರ ವಸತಿ ನಿರ್ಮಾಣ ಮಾಡಲು ನೀಡುತ್ತಿರುವ ಅನುದಾನದಿಂದ ವ್ಯವಸ್ಥಿತ ಸೂರು ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಈ ವಿಷಯವನ್ನು ಸರಕಾರದ ಗಮನಕ್ಕೆ ತರುವುದರೊಂದಿಗೆ ಅದನ್ನು ಹೆಚ್ಚಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು. 

ಸುಳ್ಳು ಜಾತಿ ಪ್ರಮಾಣ ಪತ್ರ:  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರದೆ ಇರುವ ಅಭ್ಯರ್ಥಿಗಳೂ ಸಹ ಸುಳ್ಳು ಜಾತಿ ಪ್ರಮಾಣಪತ್ರವನ್ನು ಪಡೆಯುತಿದ್ದಾರೆ ಎಂದು ದೂರಿದಾಗ, ಇಂತಹ ದೂರುಗಳು ಬಂದಲ್ಲಿ ಪರಿಶೀಲಿಸಿ, ಅಂತಹ ಪ್ರಮಾಣಪತ್ರ ರದ್ದುಮಾಡುವುದರ ಜೊತೆಗೆ  ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಜಾತಿ ನಿಂದನೆ ಪ್ರಕರಣಗಳನ್ನು  ದಾಖಲಿಸಿದಾಗ  ಪೊಲೀಸ್ ಇಲಾಖೆಯ ವರು ಪ್ರಕರಣ ಕುರಿತು ಸತ್ಯಾಸತ್ಯತೆ ಹಾಗೂ ಸಾಕ್ಷ್ಯಾ ಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅವುಗಳ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಬೆಳಕು ಯೋಜನೆ: ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಅರ್ಜಿ ಸಲ್ಲಿಸಲು ಸಾಕಷ್ಟು ಅವಕಾಶಗಳಿದ್ದು, ಪ.ಜಾತಿ ಹಾಗೂ ಪಂಗಡದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಮನೆ ನಿರ್ಮಾಣ ಮಾಡಲು  ಭೂ ಪರಿವರ್ತನೆ ಕುರಿತು ಸೂಕ್ತ ನಿರ್ದೇಶನ  ಕೋರಿ ಸರಕಾರಕ್ಕೆ ಪತ್ರ ಬರೆದಿರುವಾಗಿ ತಿಳಿಸಿದರು.

ಜಿಪಂ ಸಿಇಓ ಡಾ.ನವೀನ್ ಭಟ್ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ಕ್ರಿಯಾ ಯೋಜನೆ ರೂಪಿಸುವಾಗ ಪ.ಜಾತಿ ಹಾಗೂ ಪಂಗಡದ ಸದಸ್ಯರು ಸೇರಿದಂತೆ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಿಯಾಯೋಜನೆಗೆ ಅನುಮೋದನೆ ಪಡೆಯುವಂತೆ ಎಲ್ಲಾ ಗ್ರಾಪಂಗಳಿಗೆ ನಿರ್ದೇಶನ ನೀಡುವುದರ ಜೊತೆಗೆ  ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ತಿಳಿಸಲಾಗಿದೆ ಎಂದರು.

ಪ.ಜಾತಿ ಹಾಗೂ ಪಂಗಡದವರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ವಾಗಿ ಅಭಿವೃದ್ದಿ ಸಾಧಿಸುವ ಉದ್ದೇಶದಿಂದ ಅನೇಕ ಇಲಾಖೆಗಳ ಮೂಲಕ ಸಹಾಯಧನ ನೀಡುವ ಅನೇಕಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗೆ ಅರ್ಹರ ಆಯ್ಕೆ ಪಟ್ಟಿಯನ್ನು ಆರ್ಥಿಕ ನೆರವು ನೀಡಲು ಬ್ಯಾಂಕ್‌ಗಳಿಗೆ  ಕಳುಹಿಸಿದಾಗ ಅಲ್ಲಿನ ಸಿಬ್ಬಂದಿ ವರ್ಗದವರು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಈ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಲೀಡ್ ಬ್ಯಾಂಕ್  ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಪ.ಜಾತಿ ಹಾಗೂ ಪಂಗಡದ ವಿವಿಧ ಸಂಘಟನೆಗಳ ಮುಖಂಡರು ಮತ್ತು  ಸಾರ್ವಜನಿಕರು ತಮ್ಮ ಸಮಸ್ಯೆ ಮತ್ತು ಕುಂದುಕೊರತೆ ಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

28 ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 1ರಲ್ಲಿ ಶಿಕ್ಷೆ

ಕಳೆದ 2012ರಿಂದ ಈ ವರೆಗೆ  ಜಿಲ್ಲೆಯಲ್ಲಿ ಪ.ಜಾತಿ ಹಾಗೂ ಪಂಗಡದವರ ೨೮ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿದ್ದು, ಇವುಗಳಲ್ಲಿ ೨೬ ಪ್ರಕರಣಗಳು ದಾಖಲಾಗಿ ವಿಚಾರಣೆ ನಡೆದು ೧೩ ಪ್ರಕರಣಗಳು ಖುಲಾಸೆಯಾಗಿವೆ. ಕೇವಲ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದ್ದು  ೧೨ ಪ್ರಕರಣಗಳು ಇನ್ನೂ ವಿಚಾರಣೆಗೆ ಬಾಕಿ ಇವೆ.

ಹೆಚ್ಚಿನ ಪ್ರಕರಣಗಳು ಖುಲಾಸೆಯಾಗಲು ಸರಿಯಾದ ಕಾರಣವೇನು ಎಂಬುದನ್ನು ಅರಿತು, ಬಾಕಿ ಇರುವ  ಮುಂದಿನ ಪ್ರಕರಣಗಳಲ್ಲಿ ಆರೋಪಿತರಿಗೆ ಶಿಕ್ಷೆಯಾಗುವಂತೆ ಎಲ್ಲಾ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.

ಎರಡು ವರ್ಷಗಳ ಬಳಿಕ ನಡೆದ ಸಭೆ

ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ದಲಿತರು ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ಕರೆಯ ಬೇಕೆಂದು ಸರಕಾರದ ನಿಯಮವಿದ್ದರೂ, ಉಡುಪಿ ಜಿಲ್ಲೆಯಲ್ಲಿ ಎರಡು ವರ್ಷಗಳಿಗೂ ಅಧಿಕ ಸಮಯದ ಬಳಿಕ ಜಿಪಂ ಸಭಾಂಗಣದಲ್ಲಿ ಇಂದು ಮೊದಲ ಸಭೆ ನಡೆಯಿತು.

ಸಭೆ ಕರೆಯುವಂತೆ ನಾವು ಪದೇ ಪದೇ ಕೇಳುತ್ತಾ ಬಂದಿದ್ದೇವೆ. ಲಿಖಿತ ವಾಗಿಯೂ ಮನವಿ ಮಾಡಿದ್ದೇವೆ. ಕೊನೆಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಇಂದು ಸಭೆ ಕರೆದಿದ್ದಾರೆ ಎಂದು ದಸಂಸ ನಾಯಕ ಸುಂದರ್ ಮಾಸ್ಟರ್ ತಿಳಿಸಿದರು.

ಇನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ನೇತೃತ್ವದಲ್ಲಿ ಎಸ್‌ಸಿ-ಎಸ್‌ಟಿ ಸಭೆ ಕರೆಯಬೇಕೆಂಬ ನಿಯಮವಿದೆ. ಇಲ್ಲೂ ಎರಡೂವರೆ ವರ್ಷಗಳಿಂದ ಯಾವುದೇ ಸಭೆ ಕರೆದಿಲ್ಲ. ಹಾಗೆ ಪ್ರತಿ ಪೊಲೀಸ್ ಠಾಣಾ ಮಟ್ಟದಲ್ಲೂ ತಿಂಗಳಿಗೊಮ್ಮೆ ನಡೆಯಬೇಕಾಗಿರುವ ಸಭೆಯೂ ನಡೆಯುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ನಡೆಯುವ ದಲಿತರ ಮೇಲಿನ ದೌರ್ಜನ್ಯದ ಎಷ್ಟೊ ಪ್ರಕರಣಗಳು ಬೆಳಕಿಗೆ ಬರುತ್ತಿಲ್ಲ ಎಂದು ಅವರು ದೂರಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X