ಜಾತ್ರೆ ವೇಳೆ ಇತರ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಕೊಲ್ಲೂರು ಗ್ರಾ.ಪಂ.ಗೆ ಮನವಿ
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಂಕಾ ದೇವಸ್ಥಾನದ ವಾರ್ಷಿಕ ಜಾತ್ರೆ ವೇಳೆ ಇತರ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸ್ಥಳೀಯ ಕೊಲ್ಲೂರು ಗ್ರಾಮ ಪಂಚಾಯತಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು.
ಮಾ.25ರಂದು ನಡೆಯಲಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಜಾತ್ರೆಯಲ್ಲಿ ಇತರ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶವನ್ನು ನೀಡಬಾರದು ಎಂಬ ಮನವಿ ಇದಾಗಿದೆ.
ಈ ವೇಳೆ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂಧ್ಯಾ ರಮೇಶ್ ಹಾಗೂ ಕಿರಣ್ ಜೋಗಿ ಓಂಕಾರ್, ಸಂತೋಷ್ ಉಪಸ್ಥಿತರಿದ್ದರು.
Next Story





