Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ಸರಕಾರ...

ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ಸರಕಾರ ಸಿದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ರಾಜಕೀಯ ಷಡ್ಯಂತ್ರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ23 March 2022 11:31 PM IST
share
ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ಸರಕಾರ ಸಿದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಮಾ.23: ಭ್ರಷ್ಟಾಚಾರದ ವಿಚಾರದಲ್ಲಿ ಯಾರ ಯಾರ ಕಾಲದಲ್ಲಿ ಏನೇನು ಆಗಿದೆ ಎಂಬುದರ ಬಗ್ಗೆ ಚರ್ಚೆ ಮಾಡಲು ಹಾಗೂ ಅದಕ್ಕೆ ಉತ್ತರ ನೀಡಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಭೋಜನಾ ವಿರಾಮದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿಲುವಳಿ ಸೂಚನೆಯಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯದಲ್ಲಿನ 40 ಪರ್ಸೆಂಟ್ ಕಮಿಷನ್ ವ್ಯವಹಾರದ ಕುರಿತು ಪ್ರಧಾನಿಗೆ ಬರೆದಿರುವ ಪತ್ರದ ಕುರಿತು ಪ್ರಸ್ತಾಪಿಸಲು ಅನುಮತಿ ಕೋರಿದ ವಿಚಾರದ ಮೇಲೆ ಅವರು ಪ್ರತಿಕ್ರಿಯಿಸಿದರು.

ಭ್ರಷ್ಟಾಚಾರದ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಯಾವುದೆ ಆಧಾರವಿಲ್ಲದೆ ಚರ್ಚೆ ಮಾಡೋದು ಹೇಗೆ? ಕೆಂಪಣ್ಣ ಅವರು ಯಾವಾಗ, ಯಾಕೆ, ಯಾರ ಚಿತಾವಣೆಯಿಂದ ಈ ಪತ್ರ ಬರೆದರು ಎಂಬುದರ ಬಗ್ಗೆ ತನಿಖೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಆ ಪತ್ರದಲ್ಲಿ ಉಲ್ಲೇಖಿಸಿರುವ ಆರೋಪಗಳಿಗೆ ಯಾವುದಾದರೂ ಆಧಾರ ಇದೆಯೇ, ಆಧಾರ ರಹಿತವಾದ ಪತ್ರ ಹಿಡಿದುಕೊಂಡು ಇಲ್ಲಿ ಚರ್ಚೆ ಮಾಡಬೇಕು ಎಂದರೆ ಹೇಗೆ? ಅದರಲ್ಲಿ ಯಾವುದಾದರೂ ನಿರ್ದಿಷ್ಟವಾದ ಅಂಶಗಳಿವೆಯೇ? ಈ ಪತ್ರ ಬರೆದು ನಾಲ್ಕು ತಿಂಗಳು ಆಗಿದೆ. ಇದು ನಿಲುವಳಿ ಸೂಚನೆಯಡಿ ಹೇಗೆ ಬರುತ್ತೆ? ನಾವು ಮುಕ್ತವಾದ ಚರ್ಚೆಗೆ ಸಿದ್ಧವಿದ್ದೇವೆ. ಉತ್ತರವನ್ನು ಕೊಡುತ್ತೇವೆ. ಆದರೆ, ಈ ನಿಯಮದಲ್ಲಿ ಚರ್ಚೆಗೆ ಅವಕಾಶವಿಲ್ಲ. ಬೇರೆ ರೀತಿಯಲ್ಲಿ ತಂದು ಸಮಯ ನಿಗದಿ ಮಾಡಿ ಚರ್ಚೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಮಾಜಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯನವರೇ ನಿಮಗೆ ಸಾಕಷ್ಟು ಅನುಭವವಿದೆ. ಒಮ್ಮೆ ಸ್ಪೀಕರ್ ರೂಲಿಂಗ್ ನೀಡಿದ ನಂತರ ನೀವು ಮತ್ತೆ ಮರುಪರಿಶೀಲನೆ ಮಾಡುವಂತೆ ಕೋರಿದ್ದೀರಾ. ಅವರು ಈ ನಿಯಮಾವಳಿಯಡಿಯಲ್ಲಿ ಬರುವುದಿಲ್ಲ ಎಂದು ಹೇಳಿದ್ದಾರೆ. ಆನಂತರವು ನೀವು ಈ ವಿಷಯ ಪ್ರಸ್ತಾಪಿಸುವುದು ಅಕ್ಷಮ್ಯ ಅಪರಾಧ. ನೀವು ವಿರೋಧ ಪಕ್ಷದ ನಾಯಕರಾಗಿ ಇದು ಶೋಭೆ ತರುವುದಿಲ್ಲ. ಬೇರೆ ನಿಯಮದಡಿ ಚರ್ಚೆಗೆ ತನ್ನಿ ಎಂದರು.

ಮಾನನಷ್ಟ ಮೊಕದ್ದಮೆ ಹೂಡುತ್ತಿದ್ದೇನೆ: ಡಾ.ಕೆ.ಸುಧಾಕರ್

ಒಂದು ಪತ್ರಿಕೆಯಲ್ಲಿ ಬಂದ ಕೂಡಲೆ, ಯಾರೋ ಒಬ್ಬ ಮಾಜಿ ಶಾಸಕ ಹೇಳಿದ ಕೂಡಲೆ ಅದು ಖಾತ್ರಿಯಾಗುತ್ತದೆಯೇ? ಸಿಎಜಿ ವರದಿಯಲ್ಲಿ ಎಲ್ಲಾದರೂ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಬಗ್ಗೆ ಅಬ್ಸರ್ವ್‍ವೇಷನ್ ಮಾಡಿದ್ದಾರಾ. ಮಾಧ್ಯಮದವರು, ಪ್ರತಿ ಸೋಮವಾರ ಒಂದೊಂದು ಇಲಾಖೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ಯಾರೋ ಹೇಳಿದರು ಎಂದು ಒಂದು ವರದಿ ಇಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಈ ರಾಜಕೀಯ ಷಡ್ಯಂತ್ರದ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ.

ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X