ಶಿವಮೊಗ್ಗದ ಮಾರಿಕಾಂಬ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

ಶಿವಮೊಗ್ಗ. ಮಾ.23: ಮಂಗಳವಾರದಿಂದ ಆರಂಭಗೊಂಡಿರುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಕಾಂಬ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಲಾಗಿದೆ.
ಎರಡು ವರ್ಷಗಳಿಗೊಮ್ಮೆ ನಡೆಯುವ ಕೋಟೆ ಮಾರಿಕಾಂಬ ಜಾತ್ರೆಯಲ್ಲಿ ಪ್ರತಿವರ್ಷ ಮುಸ್ಲಿಂ ವ್ಯಾಪಾರಿಗಳ ಮಳಿಗೆಗಳೇ ಹೆಚ್ಚಾಗಿ ಇರುತ್ತಿದ್ದವು. ಆದರೆ, ಈ ಬಾರಿಯ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ಹಾಕಲು ಅವಕಾಶ ನೀಡಿಲ್ಲ. ಕೋಟೆ ಮಾರಿಕಾಂಬ ಜಾತ್ರೆಯಲ್ಲಿ ಅಂಗಡಿಗಳನ್ನು ಹಾಕುವ ಟೆಂಡರ್ ಅನ್ನು ವಿಶ್ವ ಹಿಂದೂ ಪರಿಷತ್ ಪಡೆದುಕೊಂಡಿದ್ದು, ಅಂಗಡಿಗಳ ಮೇಲೆ ಕೇಸರಿ ಬಾವುಟ ಹಾಕಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಮಾರಿ ಪೂಜೆಯಲ್ಲಿ ಆರಂಭವಾದ ಆರ್ಥಿಕ ಬಹಿಷ್ಕಾರ, ಇದೀಗ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೂ ಎಂಟ್ರಿ ಕೊಟ್ಟಿದೆ.
Next Story





