ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಸು ಮಾಲಕರ ಅನಿರ್ಧಿಷ್ಟಾವಧಿ ಮುಷ್ಕರ
ಸಾಂದರ್ಭಿಕ ಚಿತ್ರ
ಕಾಸರಗೋಡು : ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಸು ಮಾಲಕರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಖಾಸಗಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಕನಿಷ್ಠ ದರ ವನ್ನು 12 ರೂ.ಗೆ ಹೆಚ್ಚಿಸಬೇಕು, ವಿದ್ಯಾರ್ಥಿಗಳ ರಿಯಾಯಿತಿ ದರವನ್ನು 6 ರೂ.ಗೆ ಏರಿಕೆ ಮಾಡಬೇಕು ಮೊದಲಾದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಆರಂಭಿಸಿದ್ದಾರೆ.
ಕಳೆದ ನವೆಂಬರ್ ನಲ್ಲಿ ಮುಷ್ಕರ ಘೋಷಿಸಿದ್ದರೂ ಸಾರಿಗೆ ಸಚಿವರು ನೀಡಿದ ಭರವಸೆ ನೀಡಿದ್ದರೂ ಈಡೇರಿಸದ ಹಿನ್ನಲೆಯಲ್ಲಿ ಇಂದಿನಿಂದ ಮುಷ್ಕರ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
Next Story