ದ.ಕ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಿಸಾಂ ಫರಂಗಿಪೇಟೆ ನೇಮಕ
ಬಂಟ್ವಾಳ, ಮಾ.24: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹಿಸಾಂ ಫರಂಗಿಪೇಟೆ ನೇಮಕಗೊಂಡಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಹಿಸಾಂ ಫರಂಗಿಪೇಟೆ ಅವರನ್ನು ಗುರುತಿಸಿ ಶಾಸಕ ಯು.ಟಿ.ಖಾದರ್ ಅವರ ನಿರ್ದೇಶನದ ಮೇರೆಗೆ ರಾಜ್ಯ ಯುವ ಕಾಂಗ್ರೆಸ್ ನ ಅಧ್ಯಕ್ಷ ಮುಹಮ್ಮದ್ ಹಾರಿಸ್ ನಲಪಾಡ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story