ಜಡೇಜಾಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ವರ್ಗಾಯಿಸಿ ತನ್ನ ಸ್ಥಾನದಿಂದ ಕೆಳಗಿಳಿದ ಮಹೇಂದ್ರ ಸಿಂಗ್ ಧೋನಿ

ಹೊಸದಿಲ್ಲಿ: ಐಪಿಎಲ್ 2022 ರ ಉದ್ಘಾಟನೆಗೆ ಕೆಲವೇ ದಿನಗಳ ಮೊದಲು, ಮಹೇಂದ್ರ ಸಿಂಗ್ ಧೋನಿ ಗುರುವಾರ ರವೀಂದ್ರ ಜಡೇಜಾಗೆ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ.
2008 ರಲ್ಲಿ ಲೀಗ್‌ನ ಆರಂಭದಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ಈ ಋತುವಿನ ತಮ್ಮ ಕೊನೆಯ ಐಪಿಎಲ್‌ನಲ್ಲಿ ಆಡುವ ಸಾಧ್ಯತೆ ಇದೆ. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.
ಶನಿವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಸಿಎಸ್‌ಕೆ ಕಳೆದ ಆವೃತ್ತಿಯ ರನ್ನರ್ ಅಪ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತಮ್ಮ ಅಭಿಯಾನ ಆರಂಭಿಸಲಿದೆ.
Next Story