ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಹರ್ಷ ಕೊಲೆಗೆ ಸಂಬಂಧಿಸಿದಂತೆ ಅವರ ತಾಯಿ ನೀಡಿದ್ದ ದೂರಿನ ಮೇರೆಗೆ ಶಿವಮೊಗ್ಗದಲ್ಲಿ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಕೆಲವು ಬಿಜೆಪಿ ನಾಯಕರು ತನಿಖೆಯನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿದ್ದರು.
Next Story





