Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಯೋಜನೆ: ತಮಿಳುನಾಡು...

ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯಕ್ಕೆ ವಿರುದ್ಧವಾಗಿ ಖಂಡನಾ ನಿರ್ಣಯ ಅಂಗೀಕರಿಸಿದ ಕರ್ನಾಟಕ

ವಾರ್ತಾಭಾರತಿವಾರ್ತಾಭಾರತಿ24 March 2022 7:11 PM IST
share
ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯಕ್ಕೆ ವಿರುದ್ಧವಾಗಿ ಖಂಡನಾ ನಿರ್ಣಯ ಅಂಗೀಕರಿಸಿದ ಕರ್ನಾಟಕ

ಬೆಂಗಳೂರು, ಮಾ.24: ತಮಿಳುನಾಡು ರಾಜ್ಯಕ್ಕೆ ಯಾವುದೆ ಹಾನಿಯಾಗದ ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ರಾಜ್ಯ ವಿಧಾನಸಭೆಯು ಸರ್ವಾನುಮತದಿಂದ ಖಂಡಿಸಿ ತಿದ್ದುಪಡಿ ಯೊಂದಿಗೆ ನಿರ್ಣಯ ಅಂಗೀಕರಿಸಿದೆ.

ಗುರುವಾರ ವಿಧಾನಸಭೆಯಲ್ಲಿ ಭೋಜನಾ ವಿರಾಮದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ನಿರ್ಣಯಕ್ಕೆ ತಿದ್ದುಪಡಿಯೊಂದಿಗೆ ಸರ್ವಾನುಮತದ ಅಂಗೀಕಾರ ಲಭ್ಯವಾಯಿತು.

ಮೇಕೆದಾಟು ಯೋಜನೆಗೆ ಈ ಕೂಡಲೆ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವನ್ನು ಒತ್ತಾಯಿಸುವುದು. ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ-ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆಯ ಡಿಪಿಆರ್ ಅನ್ನು ಅಂತಿಮಗೊಳಿಸದಂತೆ ಹಾಗೂ ಡಿಪಿಆರ್‍ನ ಸಂಪೂರ್ಣ ಅಂಶಗಳ ಬಗ್ಗೆ ಕರ್ನಾಟಕದ ಒಪ್ಪಿಗೆ ಪಡೆದೆ ಅನುಮೋದನೆ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ ಮಾ.21ರಂದು ತಮಿಳುನಾಡು ವಿಧಾನಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನು ಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುಪ್ರೀಂಕೋರ್ಟ್ ಕಾವೇರಿ ಜಲ ವಿವಾದ ನ್ಯಾಯಾಧೀಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 ಟಿಎಂಸಿ ನೀರಿನ ಪ್ರಮಾಣವನ್ನು ಖಚಿತಪಡಿಸುವಂತೆ ನಿಗದಿಪಡಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸುಪ್ರೀಂಕೋರ್ಟ್ ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ(4.75 ಟಿಎಂಸಿ ಕುಡಿಯುವ ಬಳಕೆಗೆ) ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಣಾಮವಾಗಿ ಜಲ ವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಈ ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೆ ಭಾದಕ ಅಥವಾ ಹಾನಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳೀದರು.

ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲ ನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧೀಕರಣದ ಆದೇಶವನ್ನು ಯಾವುದೆ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ ಎಂದು ಅವರು ತಿಳಿಸಿದರು.
ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನು ಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಲ್ಲಿ ಕುಂದಾ ಪಿಎಸ್‍ಪಿ, ಸಿಲ್ಲಹಳ್ಳ ಪಿಎಸ್‍ಪಿ, ಹೊಗೇನಕಲ್ ಹಂತ-2, ಕಾವೇರಿ (ಕಟ್ಟಲೈ)-ವೈಗೈ-ಗುಂಡಾರ್ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ ಎಂದು ಅವರು ಮಾಹಿತಿ ನೀಡಿದರು.

ಪೆನಿನ್ಸುಲರ್ ರಿವರ್ ಡೆವಲಪ್‍ಮೆಂಟ್ ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಯೋಜನೆಗೆ ತಿರುವುಗೊಳಿಸುವ ವಿಸ್ತøತಾ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವೆ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು ಎಂದು ಮುಖ್ಯಮಂತ್ರಿ ಹೇಳಿದರು.

ತಮಿಳುನಾಡು ರಾಜ್ಯವು, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ. ಆದರೆ, ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕ ರಾಜ್ಯದ ಒಪ್ಪಿಗೆಯನ್ನು ಕೋರದೆ ಏಕಪಕ್ಷೀಯವಾಗಿ ಕಾನೂನು ಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನು ಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆ ವಿಸ್ತøತಾ ಯೋಜನಾ ವರದಿಯನ್ನು ಅನುಮೋದಿಸುವಂತೆ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಯೋಜನೆಗೆ ಪರಿಸರ ಅನುಮತಿಯನ್ನು ಪಡೆಯಲು ಟಿಓಆರ್ ಅನ್ನು ಅನುಮೋದಿಸುವಂತೆ ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ ಎಂದು ಅವರು ತಮ್ಮ ನಿರ್ಣಯ ಮಂಡನೆ ಮಾಡಿದರು. ಇದಕ್ಕೆ ಸದನದಲ್ಲಿ ತಿದ್ದುಪಡಿಯೊಂದಿಗೆ ಸರ್ವಾನುಮತದ ಒಪ್ಪಿಗೆ ಲಭಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X