Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.1ರಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಿಯ...

ಎ.1ರಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ

ವಾರ್ತಾಭಾರತಿವಾರ್ತಾಭಾರತಿ24 March 2022 7:26 PM IST
share
ಎ.1ರಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಿಯ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ

ಕಾಪು: ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊಂಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀಪ್ರಸನ್ನ ಗಣಪತಿ, ಶ್ರೀಭದ್ರಕಾಳಿ, ಶ್ರೀನಾಗ ದೇವರ ಸಹಿತ ಶ್ರೀಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟ ಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವವು ಎ.1ರಿಂದ ಎ.15ರವರೆಗೆ ನಡೆಯಲಿದೆ.

ಉಚ್ಚಿಲದ ಮೊಗವೀರ ಭವನದಲ್ಲಿ ಗುರುವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾಡೋಜ ಡಾ.ಜಿ.ಶಂಕರ್ ಮಾಹಿತಿ ನೀಡಿದರು.

ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀಮಹಾಲಕ್ಷ್ಮೀ ದೇವಸ್ಥಾನವು ಶಿಲಾಮಯ ಗರ್ಭಗುಡಿ, ಶಿಲಾಮಯ ಶ್ರೀಭದ್ರಕಾಳಿ ಗುಡಿ, ಶಿಲಾಮಯ ಶ್ರೀಪ್ರಸನ್ನ ಗಣಪತಿ ಗುಡಿ, ಶ್ರೀ ನಾಗದೇವರ ಗುಡಿ, ಸುತ್ತುಪೌಳಿ, ಗುರುಪೀಠ, ರಾಜಗೋಪುರ, ಯಾಗಶಾಲೆ, ವಸಂತ ಮಂಟಪ, ರಥಬೀಧಿ, ಸುತ್ತು ಆವರಣ ಗೋಡೆ, ಬಯಲು ರಂಗ ಮಂಟಪ, ಒಳಚರಂಡಿ ವ್ಯವಸ್ಥೆ, ನೆಲಹಾಸು ಅಳವಡಿಕೆ ಹಾಗೂ ಪುಷ್ಕರಣಿಗಳನ್ನೊಳಗೊಂಡ 35 ಕೋಟಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ ಮಾಡಲಾಗಿದೆ ಎಂದರು.

ಧಾರ್ಮಿಕ ಕಾರ್ಯಕ್ರಮಗಳು
ನೂತನವಾಗಿ ನಿರ್ಮಾಣಗೊಂಡ ರಾಜಗೋಪುರ ಹಾಗೂ ಲಕ್ಷ್ಮೀತೀರ್ಥ ಕೆರೆಯು ಎ.1ರ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಎ.2ರಿಂದ 15ರತನಕ ಪ್ರತಿದಿನ ಸಂಜೆ ಗಂಟೆ 4ರಿಂದ 5ರವರೆಗೆ ಸಾವಿರ ಸುಮಂಗಲೆಯರಿಂದ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ ಕಾರ್ಯಕ್ರಮ ಜರಗಲಿದೆ.

ಮಹಾಲಕ್ಷ್ಮೀ ದೇವಿಯ ಬಿಂಬ ಪ್ರತಿಷ್ಠೆ, ಸ್ವರ್ಣಕಲಶ ಪ್ರತಿಷ್ಠೆ ಹಾಗೂ ಮಹಾ ಅನ್ನಸಂತರ್ಪಣೆ ಎ.6ರಂದು ನಡೆಯಲಿದೆ. ವರ್ಷಂಪ್ರತಿ ನಡೆಯುವ ಶ್ರೀ ಮಹಾಲಕ್ಷ್ಮೀ ರಥೋತ್ಸವ ಹಾಗೂ ಮಹಾಅನ್ನಸಂತರ್ಪಣೆಯು ಎ.13ರಂದು ನಡೆಯಲಿದೆ. ಎ.15ರ ರಾತ್ರಿ 8ಗಂಟೆಗೆ ಹಾಲಿಟ್ಟು ಸೇವೆ, ರಾತ್ರಿ 9ರಿಂದ ಚತುಃ ಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಎ.16ರ ಬೆಳಗ್ಗೆ ಸಂಪೋಕ್ಷಣೆ, ಮಂತ್ರಾಕ್ಷತೆಯೊಂದಿಗೆ ಪುನಃ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಶುಭಾಂತ್ಯ ವಾಗಲಿವೆ.

ಸಿಎಂ ಸಹಿತ ಗಣ್ಯರು ಭಾಗಿ
ನಿರಂತರ 15ದಿನಗಳ ಧಾರ್ಮಿಕ ಸಬಾಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಸಂಸದರು, ಹಾಲಿ ಹಾಗೂ ಮಾಜಿ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ. ವಿವಿಧ ಮಠಾಧೀಶರುಗಳು ಮತ್ತು ಧಾರ್ಮಿಕ ಮುಖಂಡರುಗಳು ಆಶೀರ್ವಚನ ನೀಡಲಿದ್ದಾರೆ.

ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಭಾರತ ಸರಕಾರ ಪ್ರಸ್ತುತ ಪಡಿಸುವ ದಕ್ಷಿಣ ವಲಯ ಸಾಂಸ್ಕ್ರತಿಕ ಕೇಂದ್ರ ತಾಂಜವೂರು ಇವರು ಸಾದರ ಪಡಿಸುವ 20 ರಾಜ್ಯಗಳ ಕಲಾವಿದರುಗಳ ಸಾಂಸ್ಕ್ರತಿಕ ಉತ್ಸವ ಏರ್ಪಡಿಸಲಾಗಿದೆ.

ರಾಜ್ಯದ ಹಾಗೂ ಸ್ಥಳೀಯ ಕಲಾವಿದರುಗಳಿಂದ ಪ್ರತಿ ದಿನ ಸಂಜೆ ನೃತ್ಯ ವೈವಿಧ್ಯ, ಯಕ್ಷಗಾನ, ನಾಟಕ ಮುಂತಾದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಗಾನಗಂಧರ್ವ ವಿಜಯ ಪ್ರಕಾಶರವರಿಂದ ಸಾಂಸ್ಕ್ರತಿಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿ ದಿನ ಪೂರ್ವಾಹ್ನ ಗಂಟೆ 11.30ರಿಂದ ರಾಜ್ಯದ ಖ್ಯಾತ ಕಲಾವಿದರುಗಳಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಹೊರೆಕಾಣಿಕೆ ಮೆರವಣಿಗೆ
ಮಾ.27 ರಂದು ಕರಾವಳಿ ಭಾಗದ ಭಕ್ತಾಧಿಗಳ ಹೊರೆಕಾಣಿಕೆಯು 2000ಕ್ಕೂ ಮಿಕ್ಕಿದ ವಾಹನಗಳ ಮೂಲಕ ಮೂಳೂರು ಹಾಗೂ ತೆಂಕ ಎರ್ಮಾಳ್‌ನಿಂದ ಹೊರಟು ವಿವಿಧ ರೀತಿಯ ಟ್ಯಾಬ್ಲೋ, ಚೆಂಡೆ, ಭಜನಾ ಕುಣಿತ ಮುಂತಾದ ಬಿರುದಾವಳಿಗಳೊಂದಿಗೆ ದೇವಸ್ಥಾನ ತಲುಪಲಿದೆ.

ರಾಜ್ಯ ಹಾಗೂ ಹೊರರಾಜ್ಯಗಳಿಂದ 2 ರಿಂದ 3ಲಕ್ಷ ಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಸುಮಾರು ಒಂದು ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಅನ್ನಛತ್ರದ ಚಪ್ಪರ ನಿರ್ಮಿಸಲಾಗಿದೆ. ವಾಹನ ನಿಲುಗಡೆಗೆ ಬೇಕಾಗುವಷ್ಟು ಪಾರ್ಕಿಂಗ್ ಜಾಗದ ಸಿದ್ದತೆ ಮಾಡಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ.ಅಮೀನ್, ಕೋಶಾಧಿಕಾರಿ ವಿನಯ್ ಕರ್ಕೇರ, ಕಾರ್ಯದರ್ಶಿ ಶಂಕರ್ ಸಾಲ್ಯಾನ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ್ ಕುಂದರ್, ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ಕೋಶಾಧಿಕಾರಿ ಭರತ್ ಎರ್ಮಾಳ್, ಜೊತೆ ಕಾರ್ಯದರ್ಶಿ ಮೋಹನ್ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಗಂಗಾಧರ ಸುವರ್ಣ ಎರ್ಮಾಳ್, ಪ್ರಧಾನ ಅರ್ಚಕ ರಾಘವೇಂದ್ರ ಉಪಾ ಧ್ಯಾಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X