Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.28,29ರ ಮುಷ್ಕರ ಯಶಸ್ಸಿಗೆ ಕಾರ್ಮಿಕ...

ಮಾ.28,29ರ ಮುಷ್ಕರ ಯಶಸ್ಸಿಗೆ ಕಾರ್ಮಿಕ ಸಂಘಟನೆಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ24 March 2022 7:44 PM IST
share

ಮಂಗಳೂರು, ಮಾ.24: ಬಂಡವಾಳಶಾಹಿಗಳ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ, ಬೆಲೆ ಏರಿಕೆಯ ನಿಯಂತ್ರಣಕ್ಕಾಗಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರೈತ ವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣದ ವಿರುದ್ಧ ಮತ್ತು 24 ಸಾವಿರ ರೂ. ಸಮಾನ ಕನಿಷ್ಠ ವೇತನಕ್ಕಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಜೆಸಿಟಿಯು) ಕರೆಯಂತೆ 'ಭಾರತ ಉಳಿಸಿ-ಜನತೆಯನ್ನು ರಕ್ಷಿಸಿ' ಎಂಬ ಘೋಷಣೆಯೊಂದಿಗೆ ಮಾ.28,29ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮಹಾಮುಷ್ಕರವನ್ನು ಯಶಸ್ಸಿಗೊಳಿಸಬೇಕು ಎಂದು ಜೆಸಿಟಿಯು ಮಂಗಳೂರು ಘಟಕದ ಸಂಚಾಲಕ ಎಚ್.ವಿ. ರಾವ್ ಮನವಿ ಮಾಡಿದ್ದಾರೆ.

ಗುರುವಾರ ನಗರದ ವಿಕಾಸ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲೆರಡು ಅಲೆಗಳ ಸಂದರ್ಭ ಕೇಂದ್ರ-ರಾಜ್ಯ ಸರಕಾರಗಳು ವಿಧಿಸಿದ ಲಾಕ್‌ಡೌನ್‌ಗಳು ದುಡಿಯುವ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭ ಎರಡೂ ಸರಕಾರಗಳು ನೀಡಿದ ಪರಿಹಾರ ಪ್ಯಾಕೇಜ್‌ಗಳು ಬಡ ಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿ ಬಂಡವಾಳಶಾಹಿಗಳ ಜೇಬು ತುಂಬಿಸಿದ್ದವು. ಕೇಂದ್ರದ ಮೋದಿ ನೇತೃತ್ವದ ಸರಕಾರ ‘ನವ ಉದಾರೀಕರಣ ನೀತಿ’ಗಳನ್ನು ಅಕ್ರಮಣಕಾರಿಯಾಗಿ ಜಾರಿ ಮಾಡುತ್ತಿದ್ದು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಐಸಿಡಿಎಸ್ ಯೋಜನೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತಿತರ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಹಣಕಾಸಿನ ಕಡಿತ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಎಚ್.ವಿ.ರಾವ್ ಆಪಾದಿಸಿದರು.

ಕೇಂದ್ರ ಸರಕಾರದ ಜನ ವಿರೋಧಿ ತೆರಿಗೆ ನೀತಿ, ದಿನ ಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಬಾರಿ ಪ್ರಮಾಣದ ಪರೋಕ್ಷ ಜಿಎಸ್‌ಟಿಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರ ಹೆಚ್ಚಳಗೊಳ್ಳುತ್ತಲೇ ಇವೆ. ಬಡಜನರ ಆರ್ಥಿಕ ಪುನಶ್ಚೇತನಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ತೆರಿಗೆ ಕಡಿತ ಮಾಡಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಬಡ ಕುಟುಂಬಕ್ಕೆ ಮಾಸಿಕ ರೂ. 7,500 ನೇರ ನಗದು ವರ್ಗಾವಣೆ, ಪ್ರತಿ ವ್ಯಕ್ತಿಗೂ ತಲಾ 10 ಕೆ.ಜಿ ಆಹಾರ ಧಾನ್ಯಗಳನ್ನು ನೀಡಬೇಕು ಎಂಬ ಬೇಡಿಕೆಗಳನ್ನು ಸರಕಾರಗಳು ಪರಿಗಣಿಸಲಿಲ್ಲ. ಕೇಂದ್ರ ಸರ್ಕಾರ ಕೋವಿಡ್ ಸಂದರ್ಭವನ್ನೇ ಉಪಯೋಗಿಸಿಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಯಾವುದೇ ಚರ್ಚೆಯಿಲ್ಲದೆ ಪಾರ್ಲಿಮೆಂಟ್‌ನಲ್ಲಿ ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ಹಾಗೂ ಅಸ್ತಿತ್ವದಲ್ಲಿದ್ದ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ವಿರೋಧಿಯಾಗಿ ರೂಪಿಸಿತ್ತು ಎಂದು ಹೇಳಿದರು.

ದೇಶಾದ್ಯಂತ ನಡೆಯುವ ಮುಷ್ಕರದ ಭಾಗವಾಗಿ ಮಾ.28ರಂದು ಎಲ್ಲಾ ತಾಲೂಕು/ವಲಯ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ. ಮಾ.29ರಂದು ಬೆಳಗ್ಗೆ 10ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ವಿವಿಧ ವಿಭಾಗದ ಕಾರ್ಮಿಕರ ಮೆರವಣಿಗೆ ಹೊರಟು ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಗುವುದು ಎಂದು ಎಚ್.ವಿ.ರಾವ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್, ಸೀತಾರಾಮ ಬೇರಿಂಜ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮೋಹನ್ ಕೆ.ಇ., ಪಣೀಂದ್ರ, ರಾಘವ ಕೆ., ಪುರುಷೋತ್ತಮ ಪೂಜಾರಿ, ಬಿ.ಎನ್. ದೇವಾಡಿಗ, ಸುರೇಶ್ ಹೆಗ್ಡೆ, ಕರುಣಾಕರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X